ವಿಜಯಪುರ 03: ಕೋವಿಡ್-19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈಗಾಗಲೆ ಇರುವ ಗಂಟಲು ದ್ರವ ಮಾದರಿ ಪರೀಕ್ಷಾ ಲ್ಯಾಬ್ ಸಾಮಥ್ರ್ಯ ಹೆಚ್ಚಿಸುವ ಹಿನ್ನಲೆಯಲ್ಲಿ ಆರ್.ಟಿ.ಪಿ.ಸಿ.ಆರ್ ಲ್ಯಾಬ್ ಶ್ರೀಘ್ರದಲ್ಲಿಯೇ ಕಾಯರ್ಾರಂಭ ಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.
ನಗರದ ನೂತನ ಪ್ರವಾಸಿ ಮಂದಿರದಲ್ಲಿಂದು ಕೋವಿಡ್-19 ನಿಯಂತ್ರಣ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಪ್ರತಿದಿನ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ 25 ರಿಂದ 30ರಷ್ಟು ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಮಾಡಲು ಲ್ಯಾಬ್ ಇದ್ದು ಇದರ ಜೊತೆಗೆ ಆರ್.ಟಿ.ಪಿ.ಸಿ.ಆರ್ ಲ್ಯಾಬ್ ಅವಶ್ಯಕತೆ ಇರುವುದರಿಂದ ಪ್ರತಿದಿನ 250 ರಿಂದ 300 ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಸಾಮಥ್ರ್ಯವನ್ನು ಪಡೆದುಕೊಳ್ಳಲಿದ್ದು, ಬೆಂಗಳೂರು, ಕಲಬುಗರ್ಿ ಜಿಲ್ಲೆಗಳ ಮೇಲೆ ಅವಲಂಬನೆ ಯಾಗುವ ಬದಲಿಗೆ ನಮ್ಮ ಜಿಲ್ಲೆಯಲ್ಲಿಯೇ ಪರೀಕ್ಷಿಸಿಕೊಳ್ಳಬಹುದಾಗಿದ್ದು, ತುತರ್ು ಸಂದರ್ಭದಲ್ಲಿ ಬಹಳಷ್ಟು ಸಹಕಾರಿಯಾಗಲಿದೆ ಹೇಳಿದರು.
ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಈಗಾಗಲೇ 10 ಖಾಸಗಿ ಆಸ್ಪತ್ರೆಗಳು ಕೈಜೋಡಿಸಿ ಕೋವಿಡ್-19 ಪಾಸಿಟಿವ್ ರೋಗಿಗಳಿಗೆ ಚಿಕಿತ್ಸೆ ನೀಡಲು ಮುಂದಾಗಿವೆ. ಅದರಂತೆ ಇನ್ನೂ ಹೆಚ್ಚಿನ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ನೀಡುವ ಕುರಿತಂತೆ ಸಹಕಾರಿಯಾಗಲು ಅಲ್ಲಿನ ಚಿಕಿತ್ಸಾ ವ್ಯವಸ್ಥೆಗಳ ಪರಿಶೀಲನೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಸೂಚಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕಂಟೇನ್ಮೆಂಟ್ ವಲಯಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಪಾಸಿಟಿವ್ ಪ್ರಕರಣ ದೃಡ ಪಟ್ಟ ವಲಯಗಳಲ್ಲಿ ತೀವ್ರ ನಿಗಾ ಇಟ್ಟು ಪಾಥಮಿಕ ಹಾಗೂ ದ್ವಿತಿಯ ಸಂಪರ್ಕ ಹೊಂದಿರುವ ವ್ಯಕ್ತಿಗಳ ಬಗ್ಗೆ ನಿಗಾ ಇಡಬೇಕು, ಪಾಸಿಟಿವ್ ರೋಗಿಗಳ ಗುಣಮುಖ ಸಂಖ್ಯಾ ಪ್ರಮಾಣ ಹೆಚ್ಚಿರುವುದಕ್ಕೆ ಮತ್ತು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯಿಂದ ಅತ್ಯುತ್ತಮ ಕಾರ್ಯ ನಿರ್ವಹಣೆ ಬಗ್ಗೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಟಾಸ್ಕ್ಫೂಸರ್್ ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಪ್ರಾರಂಭವಾಗಿದೆ. ಈ ನಿಟ್ಟಿನಲ್ಲಿ ರೈತರಿಗೆ ಬಿತ್ತನೆ ಬೀಜಗಳ ಖರೀದಿಯಲ್ಲಿ ಯಾವುದೇ ತೊಂದರೆಗಳ ಆಗದಂತೆ ನೋಡಿಕೊಳ್ಳಬೇಕು. ಇನ್ನೂ ಕೆಲವು ಪ್ರದೇಶಗಳಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು ಇನ್ನೂ ಬಿತ್ತನೆ ಕಾರ್ಯ ಪ್ರಾರಂಭಿಸದೇ ಇರುವುದರಿಂದ ಮುಂಬರುವ ದಿನಗಳಲ್ಲಿ ಬಿತ್ತೆನ ಬೀಜಗಳ ಖರೀದಿಯಲ್ಲಿ ಯಾವುದೇ ತೊಂದರೆಗಳು ಆಗದಂತೆ ನೋಡಿಕೊಳ್ಳಬೇಕು. ತೊಗರಿ, ಶೆಂಗಾ ಹಾಗೂ ಸಜ್ಜೆ ಬೆಳೆ ಹೆಚ್ಚಿನ ರೈತರು ಅವಲಂಬನೆಯಾಗಿರುವುದರಿಂದ ಅವುಗಳ ಕೊರತೆಯನ್ನು ನೀಗಿಸಬೇಕು ಎಂದು.
ಜಿಲ್ಲೆಯಲ್ಲಿ ನಿಂಬೆ ಬೆಳಗಾರರು ಹೆಚ್ಚಿನ ಪ್ರಮಾಣದಲ್ಲಿದ್ದು ನಿಂಬೆ ಬೆಳೆಗಾರರಿಗೆ ಸರಿಯಾದ ದರ ಸಿಗುತ್ತಿಲ್ಲ ಈ ನಿಟ್ಟಿನಲ್ಲಿ ಪಯರ್ಾಯವಾಗಿ ಲಿಂಬೆ ಬೆಳೆಗಾರರಿಗೆ ಸಹಾಯವಾಗುವ ನಿಟ್ಟಿನಲ್ಲಿ ಸಕರ್ಾರ ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗುವುದು. ಈ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯವರು ನಿಂಬೆ ಬೆಳೆಗಾರ ಕುರಿತು ಪ್ರಸ್ಥಾವನೆ ನೀಡುವಂತೆ ಸೂಚಿಸಿದರು.
ಕೋವಿಡ್-19 ಸಂಕಷ್ಠದ ಪರಿಸ್ಥಿತಿಯಲ್ಲಿ ತರಕಾರಿ ಹಾಗೂ ಹೂ ಬೆಳೆಗಾಗರಿಗೆ ಸಕರ್ಾರದಿಂದ ಸಹಾಯಧನವನ್ನು ನೀಡಲಾಗುತ್ತಿದ್ದು, ಈ ಸಹಾಯಧನವು ಜಿಲ್ಲೆಯ ಎಲ್ಲ ರೈತರಿಗೆ ಮುಟ್ಟುವಲ್ಲಿ ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು. ಹೂ ಬೆಳೆಗಾರರು ಹಾಗೂ ತರಕಾರಿ ಬೆಳೆಗಾರರು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಯಾವುದೇ ಲೋಪದೋಷಗಳ ಆಗಬಾರದು ಎಂದು ಸಂಬಂಧಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ ಅಗರವಾಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಸಿಂದಗಿ ಶಾಸಕ ಎಂ.ಸಿ ಮನಗೂಳಿ, ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಮಹಾನಗರ ಪಾಲಿಕೆ ಆಯುಕ್ತ ಹಷರ್ಾ ಶಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಹೇಂದ್ರ ಕಾಪ್ಸೆ, ಕೃಷಿ ಜಂಟಿ ನಿದರ್ೇಶಕ ಶಿವಕುಮಾರ, ತೋಟಗಾರಿಕಾ ಇಲಾಖೆ ಉಪನಿದರ್ೇಶಕ ಸಂತೋಷ ಇನಾಮದಾರ ಸೇರಿದಂತೆ ಇತರರಿದ್ದರು.