ಲಕ್ನೋ, ಏ.4-ಕೇರಳದ ವೈನಾಡು ಲೋಕಸಭಾ ಕ್ಷೇತ್ರದಿಂದ ಸ್ಪಧರ್ಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಇಂದು ನಾಮಪತ್ರ ಸಲ್ಲಿಸುವ ಮೂಲಕ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದ ಜನರಿಗೆ ಅಪಮಾನ ಮಾಡಿ ದ್ರೋಹ ಎಸಗಿದ್ದಾರೆ ಎಂದು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.
ಲಕ್ನೋದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದ ರಾಹುಲ್ಗಾಂಧಿಯವರ ಮೇಲೆ ನಂಬಿಕೆ ಇಟ್ಟು ಅಮೇಥಿ ಕ್ಷೇತ್ರದ ಜನರು ಚುನಾಯಿಸಿ ಲೋಕಸಭೆಗೆ ಕಳುಹಿಸುತ್ತಿದ್ದರು. ಆದರೆ ಈ ಬಾರಿ ಅಮೇಥಿ ಜೊತೆ ವೈನಾಡಿನಲ್ಲಿ ಸ್ಪಧರ್ಿಸುವ ಮೂಲಕ ರಾಹುಲ್ ತಮ್ಮ ಕ್ಷೇತ್ರದ ಜನತೆಗೆ ದ್ರೋಹ ಬಗೆದಿದ್ದಾರೆ ಎಂದು ಟೀಕಿಸಿದರು.
ಅಮೇಥಿಯಲ್ಲಿ ಗೆಲ್ಲುವುದು ಕಷ್ಟ ಎಂಬುದು ಮನವರಿಕೆಯಾಗಿರುವುದರಿಂದಲೇ ರಾಹುಲ್ ವೈನಾಡು ಲೋಕಸಭಾ ಕೇತ್ರವನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಅವರ ಗೆಲುವು ಕಷ್ಟ ಎಂಬುದು ಕಾಂಗ್ರೆಸ್ ನಾಯಕರಿಗೂ ಗೊತ್ತು ಎಂದು ಸ್ಮೃತಿ ವಾಗ್ದಾಳಿ ನಡೆಸಿದರು.