ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ದಂಡ-ಶಿಕ್ಷೆ ಬಗ್ಗೆ ಜಾಗೃತಿ ಮೂಡಿಸಿ
Raise awareness about the ill effects and penalties of drugs
ಹಾವೇರಿ 25: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹಾಗೂ ಕಾನೂನಿನಡಿ ವಿಧಿಸುವ ದಂಡ ಮತ್ತು ಶಿಕ್ಷೆ ಬಗ್ಗೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ನಾರ್ಕೊ ಸಮನ್ವಯ ಕೇಂದ್ರ (ಓಅಓಖಆ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವ ಜನಾಂಗಕ್ಕೆ ಮಾದಕ ವಸ್ತುಗಳಿಂದ ಉಂಟಾಗುವ ತೊಂದರಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳ ಚಲನವಲನ ಗಮನಿಸುತ್ತಿರಬೇಕು ಎಂದರು.
ಈಗಾಗಲೇ ಎಲ್ಲ ಪದವಿ ಪೂರ್ವ ಸೇರಿದಂತೆ ಎಲ್ಲ ಕಾಲೇಜುಗಳು, ವಿದ್ಯಾರ್ಥಿನಿಲಯಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆಯವರು ಆಯೋಜಿಸುತ್ತಿದ್ದಾರೆ. ಜೊತೆಗೆ ಕಾಲೇಜುಗಳಲ್ಲಿ ಆ್ಯಂಟಿ ಡ್ರಗ್ ಸ್ಕಾ-್ವಡ್ ಕಮೀಟಿ ಮಾಡಬೇಕು ಹಾಗೂ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತಡೆಗೆ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಕೆ.ಎಸ್.ಆರ್.ಟಿ.ಸಿ. ಬಸ್‌ಗಳಲ್ಲಿ ವಾಹನ ಚಾಲಕರು ಖಾಸಗಿ ವ್ಯಕ್ತಿಗಳ ಪಾರ್ಸಲ್‌ಗಳನ್ನು ತಗೆದುಕೊಳ್ಳದಂತೆ ನಿರ್ದೇಶನ ನೀಡಲು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ಅಂಚೆ ಕಚೇರಿ ಹಾಗೂ ಖಾಸಗಿ ಕೋರಿಯರ್ ಸಂಸ್ಥೆಗಳು ಪದೇ ಪದೇ ಅದೇ ವಿಳಾಸಕ್ಕೆ ಬರುವ ಪಾರ್ಸ್‌ಲ್‌ಗಳ ಕುರಿತು ಗಮನಹರಿಸಬೇಕು ಎಂದು ಸಂಬಂಧಪಟ್ಟವರಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಖಾರಿ ಡಾ.ಜಯನಾಂದ, ಸಿಪಿಐ ಸಂತೋಷ ಪ್ರವಾರ, ಅರಣ್ಯ, ಕೃಷಿ, ಅಬಕಾರಿ, ವೈದ್ಯಕೀಯ ಕಾಲೇಜು, ಪದವಿ ಪೂರ್ವ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 