ಆ 11ರಂದು 371ಜೆ ಮೀಸಲಾತಿಗೆ ಆಗ್ರಹಿಸಿ ರೈತ ಭಾರತ ಪಕ್ಷದಿಂದ ಪ್ರತಿಭಟನೆ
Raitha Bharat Party protests demanding 371J reservation on August 11
ಆ 11ರಂದು 371ಜೆ ಮೀಸಲಾತಿಗೆ ಆಗ್ರಹಿಸಿ ರೈತ ಭಾರತ ಪಕ್ಷದಿಂದ ಪ್ರತಿಭಟನೆ
ವಿಜಯಪುರ, 09 : ದಿನಾಂಕ: 11-08-2025, ಬೆಳಿಗ್ಗೆ 10.00 ಗಂಟೆಗೆ ನಗರದ ಶ್ರೀ ಶಿವಾಜಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಸಂವಿಧಾನದ ಕಲಂ 371 ಜೆ ಅಡಿ ವಿಶೇಷ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಸಂವಿಧಾನಕ್ಕೆ 371ಜೆ ತಿದ್ದುಪಡಿ ಮಾಡುವಾಗ ವಿಜಯಪುರ ಜಿಲ್ಲೆಯನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳು ಕುಂಭಕರ್ಣ ನಿದ್ರೆಗೆ ಜಾರಿದ್ದರಿಂದ ನಮ್ಮ ಜಿಲ್ಲೆಯ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಘೋರ ಅನ್ಯಾಯವಾಗಿದೆ. ಜಿಲ್ಲೆಯ ಮಕ್ಕಳನ್ನು ಹಾಗೂ ಯುವಕರಿಗೆ ಸಿಗಬೇಕಾದ ಮೀಸಲಾತಿಯನ್ನು ವಂಚಿಸಿದ್ದರ ಹಿಂದೆ ಸ್ವಾರ್ಥ ರಾಜಕೀಯ ಅಡಗಿದೆ. ಕಳೆದ 11 ವರ್ಷಗಳಿಂದ ವಿಜಯಪುರ ಜಿಲ್ಲೆಗೆ ಸಾಕಷ್ಟು ಅನ್ಯಾಯವಾಗಿದೆ.
371 ಜೆ ವಿಶೇಷ ಸ್ಥಾನ ಮಾನ ಪಡೆಯಲು ಎಲ್ಲ ಅರ್ಹತೆ ಹೊಂದಿರುವ ವಿಜಯಪುರ ಜಿಲ್ಲೆಯನ್ನು ಕೈಬಿಟ್ಟಿದ್ದರಿಂದ ಜಿಲ್ಲೆಯು ಅಭಿವೃದ್ಧಿ ವಂಚಿತವಾಗಿದೆ. ಜಿಲ್ಲೆಗೆ ಸಿಗಬೇಕಾದ ನ್ಯಾಯಯುತ ಹಕ್ಕನ್ನು ಪಡೆಯಲು ರೈತ ಭಾರತ ಪಕ್ಷದಿಂದ ನಿರಂತರವಾಗಿ ಹೋರಾಟ ಮಾಡಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಹಲವರು ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ತಮ್ಮ ಹಕ್ಕುಗಳನ್ನು ಪಡೆಯುವ ಸಲುವಾಗಿ ಸಾರ್ವಜನಿಕರು ಭಾಗವಹಿಸಬೇಕು.
ಜಿಲ್ಲೆಯ ಸಮಸ್ತ ಜನತೆ ಮುಖ್ಯವಾಗಿ ವಿದ್ಯಾರ್ಥಿಗಳು, ಯುವಕ, ಯುವತಿಯರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ನ್ಯಾಯಯುತ ಹೋರಾಟದಲ್ಲಿ ಭಾಗವಹಿಸಿ ಯಶಸ್ವಿಗೆ ಕೈ ಜೋಡಿಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. 72594 02056 / 99863 99453 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 