ಯಲ್ಲಮ್ಮನಗುಡ್ಡಕ್ಕೆ ರಾಜೇಂದ್ರಕುಮಾರ ಕಟಾರಿಯಾ ಭೇಟಿ
Rajendra Kumar Kataria visits Yallammanagar
ಉಗರಗೋಳ, 16 : ಸಮೀಪದ ಯಲ್ಲಮ್ಮನಗುಡ್ಡಕ್ಕೆ ಕಂದಾಯ ಮತ್ತು ಮುಜರಾಯಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ ಕಟಾರಿಯಾ ಮಂಗಳವಾರ ಭೇಟಿ ನೀಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳ ಸ್ಥಳ ಪರೀಶೀಲಿಸಿದರು.
ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಮಂತ್ರಾಲಯದ ಎಸ್‌ಎಎಸ್‌ಸಿಐ ಯೋಜನೆಯಡಿ 100 ಕೋಟಿ ರೂಪಾಯಿ, ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಮಂತ್ರಾಲಯದ 2.0 ಯೋಜನೆಯಡಿ 18.37 ಕೋಟಿ ರೂಪಾಯಿ ಹಾಗೂ ಯಲ್ಲಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ 97 ಕೋಟಿ ರೂಪಾಯಿ ವೆಚ್ಚದ ಯೋಜನೆಯಲ್ಲಿ ಕೈಗೊಳ್ಳಲಿರುವ ಕಾಮಗಾರಿಗಳ ಸ್ಥಳಗಳನ್ನು ಹಾಗೂ ಮಾಹಿತಿ ಸಂಗ್ರಹಿಸಿದರು.
ದೇವಸ್ಥಾನ ಉಪಕಾರ್ಯಧರ್ಶಿ ನಾಗರತ್ನಾ ಚೋಳಿನ, ಕಿತ್ತೂರ ಪ್ರಾಧಿಕಾರದ ಕಾರ್ಯಧರ್ಶಿ ಪ್ರಭಾವತಿ ಪಕ್ಕಿರಪೂರ, ತಹಶೀಲ್ದಾರ ಮಲ್ಲಿಕಾರ್ಜುನ ಹೇಗ್ಗನ್ನವರ, ಸತ್ಯವತಿ ಮೇಡಂ, ಶೀತಲ ಕಡಟ್ಟಿ, ಅಲ್ಲಮಪ್ರಭು ಪ್ರಭುನವರ, ಆರ್ ಎಚ್ ಸವದತ್ತಿ, ಎಕನಗೌಡ ಮುದ್ದನಗೌಡ್ರ, ಪರಸನಗೌಡ ಕಾಳಿಂಗೌಡ್ರ, ಪಂಡಿತ ಯಡೂರಯ್ಯ, ಪಿ ರಾಜಶೇಖರಯ್ಯ, ಹಾಗೂ ತಾಲೂಕಿನ ಅಧಿಕಾರಿಗಳು ಮತ್ತು ದೇವಸ್ಥಾನ ಸಿಬ್ಬಂದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 