2ನೇ ವಾರ್ಷಿಕೋತ್ಸವ ಧ್ವಜಾರೋಹಣ ನೆರವೇರಿಸಿದ ರಾಜನಾಥ್
Rajnath performs the 2nd anniversary flag hoisting ceremony
ಅಯೋಧ್ಯೆ: ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಸಂದ ಹಿನ್ನೆಲೆಯಲ್ಲಿ, ಬುಧವಾರ ನಡೆದ' ಪ್ರಾಣ ಪ್ರತಿಷ್ಠಾ ದ್ವಾದಶಿ' ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು.
ಮಂದಿರ ಸಂಕೀರ್ಣದಲ್ಲಿರುವ ಏಳು ಉಪಗುಡಿಗಳಲ್ಲಿ ಒಂದಾದ ಅನ್ನಪೂರ್ಣ ಮಂದಿರದಲ್ಲಿ ರಾಜನಾಥ್ ಸಿಂಗ್ ಅವರು ಧ್ವಜಾರೋಹಣ ಮಾಡಿದರು. ಈ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಚಿವರಿಗೆ ಸಾಥ್ ನೀಡಿದರು.
ಕಳೆದ ನವೆಂಬರ್ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರದ ಗೋಪುರದ ಮೇಲೆ ಕೇಸರಿ ಧ್ವಜ ಹಾರಿಸಿ ಮಂದಿರ ನಿರ್ಮಾಣದ ಪೂರ್ಣತೆಯನ್ನು ಘೋಷಿಸಿದ್ದರು. ಅದರ ಮುಂದುವರಿದ ಭಾಗವಾಗಿ ಇಂದು ಈ ಧ್ವಜಾರೋಹಣ ನೆರವೇರಿಸಲಾಯಿತು.
ರಾಮಮಂದಿರಕ್ಕೆ ಭೇಟಿ ನೀಡುವ ಮುನ್ನ ರಾಜನಾಥ್ ಸಿಂಗ್ ಮತ್ತು ಯೋಗಿ ಆದಿತ್ಯನಾಥ್ ಅವರು ಹನುಮನಗಢಿ ಮಂದಿರಕ್ಕೆ ತೆರಳಿ ಹನುಮಂತನ ದರ್ಶನ ಪಡೆದರು. ನಂತರ ರಾಮಲಲ್ಲಾನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ರಕ್ಷಣಾ ಸಚಿವರು, 'ಪ್ರಾಣ ಪ್ರತಿಷ್ಠಾ ದ್ವಾದಶಿ' ಕಾರ್ಯಕ್ರಮದ ಮುಖ್ಯ ಯಜಮಾನರಾಗಿ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.
ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು: ಬಾಲರಾಮನ ದರ್ಶನಕ್ಕಾಗಿ ದೇಶದ ಮೂಲೆಮೂಲೆಗಳಿಂದ ಸುಮಾರು 5 ರಿಂದ 6 ಲಕ್ಷ ಭಕ್ತರು ಅಯೋಧ್ಯೆಗೆ ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ವಿಶೇಷ ಧಾರ್ಮಿಕ ವಿಧಿವಿಧಾನಗಳು ಶನಿವಾರವೇ ಆರಂಭವಾಗಿದ್ದು, ಮುಂಬರುವ ಶುಕ್ರವಾರದವರೆಗೆ ಮುಂದುವರಿಯಲಿವೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.ಜನವರಿ 22, 2024 ರಂದು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಬಾಲರಾಮನ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ನೆರವೇರಿತ್ತು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 