ಸದಲಗಾ ವಿಭಾಗದ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜು ಕೋಳಿ ಅವಿರೋಧ ಆಯ್ಕೆ: ಸನ್ಮಾನ
Raju Koli elected unopposed as president of Sadalaga Division Journalists Association: Honored
ಕಾಗವಾಡ 12: ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಪತ್ರಕರ್ತ ರಾಜು ಕೋಳಿ ಇವರು ಇತ್ತಿಚಿಗೆ ಸದಲಗಾ ವಿಭಾಗ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ತಾಲೂಕಿನ ಶಿರಗುಪ್ಪಿ ಗ್ರಾಮದ ಗೆಳೆಯರ ಬಳಗದ ಸದಸ್ಯರು ಶಿರಗುಪ್ಪಿಯ ಅಮೃತ ಗಾರ್ಡನ್ ಹೊಟೇಲ್‌ನ ಸಭಾ ಭವನದಲ್ಲಿ ರವಿವಾರ ದಿ. 11ರಂದು ಅವರನ್ನು ಸನ್ಮಾನಿಸಿ, ಅಭಿನಂದಿಸಿದ್ದಾರೆ.
ರಾಜು ಕೋಳಿ ಅವರು ಕಾಗವಾಡ, ಚಿಕ್ಕೋಡಿ ತಾಲೂಕಿನಲ್ಲಿ ಕಳೆದ ಅನೇಕ ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಸದಲಗಾ ವಿಭಾಗ ಪತ್ರಕರ್ತರ ಸಂಘದ ವತಿಯಿಂದ ಇತ್ತಿಚಿಗೆ ನಡೆದ ಸಭೆಯಲ್ಲಿ ಅವರನ್ನು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು.
ರಮೇಶ ಗುರವ, ರವಿ ಕುರುಂದವಾಡೆ, ರಾಜು ಮೊನೆ, ಲಕ್ಷ್ಮಣ ಚವ್ಹಾನ, ಗೀರೀಶ ಪಾಟೀಲ, ಮಾದಗೌಡ ಪಾಟೀಲ, ಶೀತಲ್ ಮೊನೆ, ಮಹೇಶ ಪಾಟೀಲ, ದಾದಾ ಚಂದೂರೆ, ಶೆಟ್ಟು ವಡ್ಡರ, ಸುರೇಶ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 