ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗುವಂತಾಗಿದ್ದು ವಿಧಿಯ ಆಟ: ಡಾ. ಸುಧಾಕರ್ ಟ್ವೀಟ್
ಬೆಂಗಳೂರು, ಜೂ.10,ಇದೇ ತಿಂಗಳ 19ರಂದು ನಡೆಯಲಿರುವ ರಾಜ್ಯ ಸಭೆಯ ದ್ವೈ-ವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಮಲ್ಲಿಕಾರ್ಜುನ್ ಖರ್ಗೆ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ ಡಿ ದೇವೇಗೌಡ ಅವರು ಈಗಾಗಲೇ ನಾಮ ಪತ್ರ ಸಲ್ಲಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಹಿರಿಯರು ಇಬ್ಬರು ಅಖಾಡಕ್ಕಿಳಿಯುತ್ತಿರುವುದರಿಂದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕೆ ಅವರು ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ. ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗುವಂತಾಗಿದ್ದು ವಿಧಿಯ ಆಟ. ಆದರೆ, ಈ ಮುತ್ಸದ್ಧಿಗಳ ಸೇವೆ ಹಾಗೂ ಹೋರಾಟ ಅನುಕರಣೀಯ. ದೇವರು ಇಬ್ಬರಿಗೂ ಆರೋಗ್ಯವನ್ನು ಕರುಣಿಸಲಿ. ಬಿಜೆಪಿಯ ಉದಾರತೆಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡುವ ಮೂಲಕ ಇಬ್ಬರ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 