ರಾಜ್ಯೋತ್ಸವ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

ಬೆಳಗಾವಿ 30: ಕನರ್ಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಇಂದು ಸಂಜೆ ಸಿಪಿಎಡ್ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ವೇದಿಕೆಯ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಗಣ್ಯರು, ಸನ್ಮಾನಿತರು, ನಾಗರಿಕರಿಗೆ ತೊಂದರೆಯಾಗದಂತೆ ಸೂಕ್ತ ಸ್ಥಳ ಮತ್ತು ಆಸನಗಳನ್ನು ಕಲ್ಪಿಸುವಂತೆ ಸೂಚಿಸಿದರು.

ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸನ್ಮಾನಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಬೇಕು.

ತಮಗೆ ವಹಿಸಿದ ಕೆಲಸಗಳನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಸಮಾರಂಭ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ ಕುಡಿಯುವ ನೀರು ಒದಗಿಸಬೇಕು. ಮೈದಾನದ ಒಂದು ಬದಿಯಲ್ಲಿ ಮೊಬೈಲ್ ಶೌಚಾಲಯಗಳನ್ನು ಇರಿಸುವಂತೆ ನಿದರ್ೆಶನ ನೀಡಿದರು.

 ಸೂಕ್ತ ಬಂದೋಬಸ್ತ್:

ರಾಜ್ಯೋತ್ಸವದ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸುವುದರಿಂದ ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ಸೂಕ್ತ ಬಂದೋಬಸ್ತ್ ಮಾಡಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ ಹೇಳಿದರು.

ಅದೇ ರೀತಿ ಭದ್ರತೆ, ಪಾಕರ್ಿಂಗ್ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ಸಂದರ್ಭದಲ್ಲಿ ಜನದಟ್ಟಣೆಯ ನಿರ್ವಣೆಗೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪರೇಡ್ ಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ನಂತರ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹಾಗೂ ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ ಅವರು, ರಾಜ್ಯೋತ್ಸವ ಮೆರವಣಿಗೆ ಹಾಗೂ ಸ್ತಬ್ಧಚಿತ್ರಗಳು ಕೂಡುವ ಸ್ಥಳವನ್ನು ಹಾಗೂ ಪ್ರೇಕ್ಷಕರ ಗ್ಯಾಲರಿ ಪರಿಶೀಲಿಸಿದರು.

ಪೊಲೀಸ್ ಭದ್ರತೆಗೆ ಅನುಕೂಲವಾಗುವಂತೆ ಬ್ಯಾರಿಕೇಡ್ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಚನ್ನಮ್ಮ ಪುತ್ಥಳಿ ನವೀಕರಣ ಕಾರ್ಯವನ್ನು ಪರಿಶೀಲಿಸಿದರು.

ಮಹಾಪೌರರಾದ ಬಸಪ್ಪ ಚಿಕ್ಕಲದಿನ್ನಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಾಮಚಂದ್ರನ್, ಮಹಾನಗರ ಪಾಲಿಕೆ ಆಯುಕ್ತ ಶಶಿಧರ್ ಕುರೇರ್, ಅಪರ ಜಿಲ್ಲಾಧಿಕಾರಿ ಡಾ.ಬೂದೆಪ್ಪ ಹೆಚ್.ಬಿ., ಹಿಂಡಲಗಾ ಜೈಲು ಅಧೀಕ್ಷಕ ಶೇಷ, ಡಿಡಿಪಿಐ .ಬಿ.ಪುಂಡಲೀಕ್, ಉಪ ವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ ಮತ್ತಿತರರು ಉಪಸ್ಥಿತರಿದ್ದರು