ಪೊಲೀಸ್ ಠಾಣೆಯಲ್ಲಿ ರಕ್ಷಾ ಬಂಧನ ಆಚರಣೆ
Raksha Bandhan celebration at the police station
ಪೊಲೀಸ್ ಠಾಣೆಯಲ್ಲಿ ರಕ್ಷಾ ಬಂಧನ ಆಚರಣೆ
ಯಲಬುರ್ಗಾ 10 : ಅಣ್ಣತಂಗಿಯರ ಅನುಬಂಧದ ರಕ್ಷಾಬಂಧನ ಹಬ್ಬವನ್ನು ತಾಲೂಕಿನಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಬಿಜೆಪಿ ತಾಲೂಕ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂತೋಷಿಮಾ ಜೋಶಿ ಪದಾಧಿಕಾರಿಗಳು ಹಾಗೂ ಮಹಿಳಾ ಕಾರ್ಯಕರ್ತರು ಪೊಲೀಸ್ ಠಾಣೆಗಳಿಗೆ ತೆರಳಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ರಾಖಿ ಕಟ್ಟುವ ಮೂಲಕ ಪೊಲೀಸರು ಕೂಡ ನಮ್ಮ ಕುಟುಂಬದವರೆ ಎನ್ನುವ ಸಂದೇಶವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆಚರಿಸಲಾಗುತ್ತಿದೆ ಎಂದರು. ನಂತರ ಪಿಎಸ್‌ಐ ವಿಜಯ ಪ್ರತಾಪ್ ಮಾತನಾಡಿ, ಅಣ್ಣ ತಂಗಿಯರ ನಡುವಿನ ಬಾಂಧವ್ಯವನ್ನು ಬಲಪಡಿಸುವ ಹಬ್ಬವೆಂದರೆ ರಕ್ಷಾ ಬಂಧನ. ಹಿಂದೂ ಧರ್ಮದಲ್ಲಿ ರಕ್ಷಾ ಬಂಧನಕ್ಕೆ ಹೆಚ್ಚು ಪ್ರಾಮುಖ್ಯತೆ ಇದೆ. ಅಣ್ಣ ತಂಗಿ ಹಾಗೂ ಅಕ್ಕ ತಮ್ಮಂದಿರರ ನಡುವಿನ ಪವಿತ್ರವಾದ ಪ್ರೀತಿಗೆ, ಈ ದಿನ ಸಮರೆ್ಣಯಾಗಿದೆ. ಸಹೋದರಿಯೊಬ್ಬಳು ತನ್ನ ಸಹೋದರರ ಕೈಗೆ ಕಟ್ಟುವ ರೇಷ್ಮೆ ದಾರವು ಕೇವಲ ಒಂದು ದಾರವಲ್ಲ. ಅದು ಇಬ್ಬರ ನಡುವಿನ ಶುದ್ಧ, ಪವಿತ್ರ ಮತ್ತು ನಿರಂತರ ಪ್ರೀತಿಯ ಸಂಕೇತ. ಸಹೋದರನು ತನ್ನ ಸಹೋದರಿಯನ್ನು ನೋಡಿಕೊಳ್ಳುವುದಾಗಿ ಮತ್ತು ತನ್ನ ಜೀವನಪರ್ಯಾಂತ ಅವಳನ್ನು ರಕ್ಷಿಸುವುದಾಗಿ ಭರವಸೆ ನೀಡುತ್ತಾನೆ. ಮತ್ತೊಂದೆಡೆ ಸಹೋದರಿ ತನ್ನ ಸಹೋದರನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾಳೆ. ಪರಸ್ಪರ ಬಾಂಧವ್ಯವನ್ನು ಸಾರುವ ಈ ಹಬ್ಬವು ಪ್ರತಿಯೊಬ್ಬರ ಬಾಲ್ಯದ ನೆನಪುಗಳಿಗೆ ಸಾಕ್ಷಿಯಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಶಕುಂತಲಮ್ಮ ಮಾಲಿಪಾಟೀಲ್, ನಿರ್ಮಲಮ್ಮ ಪಾಟೀಲ್, ತಾಲೂಕ ವಕ್ತಾರರಾದ ವೀರಣ್ಣ ಹುಬ್ಬಳ್ಳಿ, ತಾಲೂಕ ಪ್ರಧಾನ ಕಾರ್ಯದರ್ಶಿಯಾದ ಅಮರೇಶ್ ಹುಬ್ಬಳ್ಳಿ ಮಹಿಳಾ ಮೋರ್ಚಾ ತಾಲೂಕ ಪ್ರಧಾನ ಕಾರ್ಯದರ್ಶಿ ನಾಗರತ್ನ ಸೋಮನಗೌಡ ಯುವ ಮೋರ್ಚಾ ಅಧ್ಯಕ್ಷ ಕಲ್ಲೇಶಪ್ಪ ಕರಮುಡಿ, ಪಾರ್ವತಿ ಅನಸಿ , ಬಸಮ್ಮ ಗದಿಗಿನಮಠ , ಗೌತಮ್ ಜೋಶಿ ಹಾಗೂ ಹಿರಿಯರು ಎಲ್ಲಾ ಮಹಿಳಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 