ರಮೇಶ ಜಾರಕಿಹೊಳಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ಗೆಲುವಿಗೆ ಕಾರ್ಯತಂತ್ರ
Ramesh Jarkiholi's strategy for winning the BDCC Bank elections
ರಮೇಶ ಜಾರಕಿಹೊಳಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ಗೆಲುವಿಗೆ ಕಾರ್ಯತಂತ್ರ
ಯರಗಟ್ಟಿ, 21 ; ಅಕ್ಟೋಬರ್ 19 ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಯರಗಟ್ಟಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಸೌಹಾರ್ದ ಸಭೆ ಗುರುವಾರ ಪಟ್ಟಣದಲ್ಲಿ ರಮೇಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆಯಿತು.
‘ಚುನಾವಣೆಗೆ ಇನ್ನೂ ಮೂರು ತಿಂಗಳು ಬಾಕಿ ಇದ್ದರೂ, ಮೊದಲ ಹಂತದ ಪ್ರಚಾರ ಈಗಾಗಲೇ ಆರಂಭವಾಗಿದೆ. ಬಿಡಿಸಿಸಿ ಬ್ಯಾಂಕ್ ಚುನಾವಣೆ ತೀವ್ರ ಪೈಪೋಟಿಯಿಂದ ಕೂಡಿದ್ದು, ನಾವು ಇದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ಯರಗಟ್ಟಿ ಅಭ್ಯರ್ಥಿ ಅಜೀತಕುಮಾರ ದೇಸಾಯಿ, ಸವದತ್ತಿ ಅಭ್ಯರ್ಥಿ ವೀರೂಪಾಕ್ಷ ಮಾಮನಿ ಹಾಗೂ ನಮ್ಮ ಎಲ್ಲಾ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಲು ಈಗಾಗಲೇ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ. ನಮ್ಮ ಗುಂಪು ಮತ್ತೊಂದು ಅವಧಿಗೆ ಅಧಿಕಾರಕ್ಕೆ ಮರಳುತ್ತದೆ ಎಂಬ ವಿಶ್ವಾಸ ನಮಗಿದೆ’ ಎಂದು ರಮೇಶ ಜಾರಕಿಹೊಳಿ ಸಭೆಯಲ್ಲಿ ಹೇಳಿದರು.ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ನ್ನು ಬಲಿಷ್ಠವಾಗಿ ಕಟ್ಟಲು ಸಮಿತಿಯ ಎಲ್ಲ ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆಮಾಡಬೇಕು. ಎಂಬ ಮಾತು ಕಥೆಗಳು ಆಗಿದ್ದವು ಆದರೆ ಹೊಸಬರ ಪಟ್ಟಿ ಹೆಚ್ಚುತ್ತಿರುವ ಕಾರಣ ಚುಣಾವಣೆ ಮಾಡಬೇಕಾಗಿದೆ.
ಈ ವೇಳೆ ಮಾಜಿ ಯಲ್ಲಮ್ಮನ ದೇವಸ್ಥಾನ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಜಗದೀಶ ಕೌಜಗೇರಿ, ವೆಂಕಟೇಶ ದೇವರಡ್ಡಿ, ರಾಜೇಂದ್ರಗೌಡ ಪಾಟೀಲ, ಮೋಹನ ಹಾದಿಮನಿ, ಗೌಡಪ್ಪ ಸವದತ್ತಿ, ಮಹಾದೇವ ಯಂಡ್ರಾವಿ, ಪಿಕೆಪಿಎಸ್ ಅಧ್ಯಕ್ಷರಾದ ಮಹಾಂತೇಶ ಗೋಡಿ, ವಿಠ್ಠಲ ಬಂಟನೂರ, ಬಿ. ಕೆ. ಪಾಟೀಲ, ಮಾಜಿ ತಾ. ಪಂ. ಅಧ್ಯಕ್ಷರಾದ ವಿನಕುಮಾರ ದೇಸಾಯಿ, ಪರ್ವತಗೌಡ ಪಾಟೀಲ, ಬಿಡಿಸಿಸಿ ಬ್ಯಾಂಕ ನಿರ್ದೆಶಕರಾದ ರತ್ನಾ ಮಾಮನಿ, ಮಾಜಿ ಬಿಜೆಪಿ ಮಂಡಳ ಅಧ್ಯಕ್ಷ ಈರಣ್ಣಾ ಚಂದರಗಿ, ಮಾಜಿ ಎಪಿಎಂಸಿ ಅಧ್ಯಕ್ಷ ಪ್ರಕಾಶ ನರಿ, ಪುಂಡಲಿಕ ಮೇಟಿ, ಬೀರ್ಪ ಕುರಿ, ಕೃಷ್ಣಮೂರ್ತಿ ತೊರಗಲ್, ಆನಂದ ಬಾಗೋಡಿ, ಸದಾನಂದ ಪಾಟೀಲ, ಕುಮಾರ ಜಕಾತಿ ಮಹಾದೇವ ಮುರಗೋಡ, ಕಾಡಪ್ಪ ವೀರಶೆಟ್ಟಿ ಸೇರಿದಂತೆ 23 ಪಿಕೆಪಿಎಸ್ ಅಧ್ಯಕ್ಷ ಹಾಗೂ ಸರ್ವ ಸದಸ್ಯರು ಇದ್ದರು
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 