ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ರಮೇಶ ಕಾಂಬಳೆ ಆಯ್ಕೆ
ತಾಳಿಕೋಟಿ,20 :ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ರಿ ) ಬೆಂಗಳೂರು, ಜಿಲ್ಲಾ ಘಟಕ ವಿಜಯಪುರ ಕೂಡ ಮಾಡುವ 2024-25 ಜ್ಯೋತಿಬಾ ಫುಲೆ ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಅಸ್ಕಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾಗಿರುವ ರಮೇಶ ಕಾಂಬಳೆ ರವರಿಗೆ ವಿಜಯಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.