ನವದೆಹಲಿ, ನವೆಂಬರ್ 28 -ದೇಶದ ಎರಡು ಲಕ್ಷಕ್ಕೂ ಹೆಚ್ಚು ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟಕ್ಕಾಗಿ ಶಾಲಾ ಕೈತೋಟಗಳನ್ನು ಬೆಳೆಸಲಾಗಿದೆ ಎಂಬ ಮಾಹಿತಿಯನ್ನು ಗುರುವಾರ ರಾಜ್ಯಸಭೆಗೆ ನೀಡಲಾಯಿತು.
ರಾಜ್ಯಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ನೀಡಿದ ಉತ್ತರದಲ್ಲಿ ಈ ವಿಷಯ ತಿಳಿಸಿದರು.
ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾಲೆಗಳಲ್ಲಿ ಶಾಲಾ ಕೈತೋಟಗಳನ್ನು ಬೆಳೆಸಲು ಕೇಂದ್ರ ಅಗತ್ಯ ಪ್ರೋತ್ಸಾಹ ನೀಡುತ್ತಿದೆ ಎಂದು ಅವರು ಹೇಳಿದರು.
ಶಾಲಾ ಕೈತೋಟಗಳಲ್ಲಿ ಬೆಳೆಯುವ ವಿವಿಧ ತರಕಾರಿ ಮತ್ತು ಹಣ್ಣುಗಳನ್ನು ಮಧ್ಯಾಹ್ನದ ಬಿಸಿ ಊಟಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಈ ಯೋಜನೆಯಡಿ ಇನ್ನೂ 9 ಲಕ್ಷ ಶಾಲೆಗಳಲ್ಲಿ ಶಾಲಾ ಕೈತೋಟಗಳನ್ನು ಬೆಳೆಸಲಾಗುವುದು.
ಸಿಬಿಎಸ್ ಸಿಯ ಹತ್ತು ಮತ್ತು ಹನ್ನೆರಡನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಹೆಚ್ಚಳವನ್ನು ವಾಪಸ್ ಪಡೆಯುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ಸ್ವಾಯತ್ತ ಸಂಸ್ಥೆ ಸೇರಿದಂತೆ ದೇಶದ ಎಲ್ಲ ವಿದ್ಯಾರ್ಥಿಗಳಿಗೂ ಅನ್ವಯವಾಗಲಿರುವುದರಿಂದ ಶುಲ್ಕ ಕಡಿಮೆ ಮಾಡುವುದು ಅಸಾಧ್ಯ ಎಂದರು.