ವಿಕಲಚೇತನ ಪ್ರವಾಸಿಗರ ಹಿತದೃಷ್ಟಿಯಿಂದ ಬ್ಯಾಟರಿಚಾಲಿತ ವಾಹನಗಳಿಗೆ ರ್ಯಾಂಪ್ ಅಳವಡಿಕೆ
Ramp installation for battery-powered vehicles for the benefit of disabled tourists
ವಿಜಯನಗರ (ಹೊಸಪೇಟೆ) 19: "ವಿಶ್ವ ಪರಂಪರೆ ಹಂಪಿ"ಯ ವಿಜಯ ವಿಠಲ ದೇವಸ್ಥಾನಕ್ಕೆ ಪ್ರವಾಸಿಗರನ್ನು ಕರೆದೊಯ್ಯುವ ವಿದ್ಯುತ್ ಚಾಲಿತ ವಾಹನಗಳಿಗೆ ವಿಶೇಷಚೇತನ ಸ್ನೇಹಿಯಾಗಿಸಲು ವಿದ್ಯುತ್ ಚಾಲಿತ ವಾಹನಗಳಿಗೆ ಹಿಂಭಾಗದಲ್ಲಿ ಹೆಚ್ಚುವರಿಯಾಗಿ ರ್ಯಾಂಪ್ (ಖಚಿಟಠಿ) ಅಳವಡಿಸಲಾಗಿದೆ.
ವಿಶೇಷಚೇತನರು ತಮ್ಮ ವೀಲ್ ಚೇರ್ ಗಳನ್ನು ಬಳಸಿ ಬ್ಯಾಟರಿಚಾಲಿತ ವಾಹನದಲ್ಲಿ ಕೂಡಲು ಅನುಕೂಲವಾಗಲಿದ್ದು. ಆ ಮೂಲಕ ಪ್ರವಾಸಿ ತಾಣವಾದ ವಿಜಯ ವಿಠಲ ದೇವಸ್ಥಾನ ಕಲಾ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ನೋಂಗ್ಜಾಯ್ ಮೊಹ್ಮದ್ ಅಲಿ ಅಕ್ರಂ ಷಾ ತಿಳಿಸಿದರು.
ಹಂಪಿಯಲ್ಲಿ ವಿಶೇಷಚೇತನರಿಗೆ ಆಗುತ್ತಿರುವ ಸಮಸ್ಯೆಗಳನ್ನು ಗಮನಿಸಿ, ತಾಲೂಕು ಪಂಚಾಯತಿಯ ಇಒ ಅವರಿಗೆ 2018-2019 ನೇ ಆದಿಭಾರ ಶುಲ್ಕ ಯೋಜನೆಯ ಉಳಿಕೆ ಅನುದಾನದಲ್ಲಿ ರ್ಯಾಂಪ್ ಅಳವಡಿಸಲು ನಿರ್ದೇಶನ ನೀಡಲಾಗಿತ್ತು. ಅದರಂತೆ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ 20 ವಾಹನಗಳ ಪೈಕಿ 6 ಬ್ಯಾಟರಿಚಾಲಿತ ವಾಹನಗಳಿಗೆ ಅಳವಡಿಸಲಾಗಿದ್ದು, ವಿಶೇಷಚೇತನರಿಗೆ ತುಂಬಾ ಉಪಯುಕ್ತವಾಗಲಿದೆ ಎಂದರು.
ಜಿಲ್ಲಾ ಪಂಚಾಯತ್ ಸಿಇಓ ಅವರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ವಿಶೇಷಚೇತನರಿಂದ ಭರಪೂರ ಮೆಚ್ಚಗೆ ವ್ಯಕ್ತವಾಗುತ್ತಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 