ವೈದ್ಯಕೀಯ ಕಾಲೇಜಗಾಗಿ ಜನ ವೇದಿಕೆಯಿಂದ ರಂಗೋಲಿ ಚಳವಳಿ
Rangoli movement from Jana Vedike for medical college
ದೇವರಹಿಪ್ಪರಗಿ 18: ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಶಿಕ್ಷಣ ಸಂಸ್ಥೆ ಹಾಗೂ ಜಿಲ್ಲಾ ಆಸ್ಪತ್ರೆಯ ಹಸ್ತಾಂತರ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾದ ಕಾರಣ ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಪಟ್ಟಣದಲ್ಲಿ ವಿವಿಧ ವೃತ್ತದಲ್ಲಿ ರಂಗೋಲಿ ಚಳುವಳಿ ಮಾಡುವ ಮೂಲಕ ಜನ ವೇದಿಕೆ ಆಗ್ರಹಿಸಿದೆ.
ಪಟ್ಟಣದಲ್ಲಿ ಮಂಗಳವಾರದಂದು ವಿವಿಧ ಪ್ರಗತಿಪರ ಸಂಘಟನೆಗಳ ಮೂಲಕ ವಿವಿಧ ವೃತ್ತಗಳಲ್ಲಿ ರಂಗೋಲಿ ಬಿಡಿಸಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ ಸುರೇಶ ಮ್ಯಾಗೇರಿ ಅವರಿಗೆ ಸಲ್ಲಿಸಿ ಕರ್ನಾಟಕ ಜನಾರೋಗ್ಯ ಚಳವಳಿ ಹಾಗೂ ಜನ ವೇದಿಕೆಯ ಅಖಿಲಾವಾಸನ ಆಗ್ರಹಿಸಿದರು.ನಂತರ ಮಾತನಾಡಿದ ಅವರು, ವಿಜಯಪುರ ಸರ್ಕಾರಿ ಆಸ್ಪತ್ರೆ ಜಿಲ್ಲೆಯ ಜನತೆಗೆ ಸುಲಭ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ಪ್ರಮುಖ ಆರೋಗ್ಯ ಕೇಂದ್ರವಾಗಿದೆ. ತುರ್ತು ಚಿಕಿತ್ಸೆ, ಹೆರಿಗೆ, ಮಕ್ಕಳ ಆರೈಕೆ ಹಾಗೂ ಸಾಮಾನ್ಯ ಚಿಕಿತ್ಸೆಗಳಲ್ಲಿ ಇದು ಗ್ರಾಮೀಣ ಜನತೆಗೆ ದೊಡ್ಡ ಆಶ್ರಯವಾಗಿದೆ,
ಸರ್ಕಾರಿ ಆಸ್ಪತ್ರೆ ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿಗಳ ಸಮರ್ಿತ ಸೇವೆಯಿಂದ ಜನರಿಗೆ ನಿರಂತರ ಚಿಕಿತ್ಸೆಯನ್ನು ನೀಡುತ್ತಿದೆ. ಆರೋಗ್ಯ ಸೌಲಭ್ಯಗಳನ್ನು ಎಲ್ಲರಿಗೂ ತಲುಪಿಸುವಲ್ಲಿ ಈ ಆಸ್ಪತ್ರೆ ಮಹತ್ವದ ಪಾತ್ರವಹಿಸುತ್ತಿದೆ. ಆದಕಾರಣ ವಿಜಯಪುರ ಸಾರ್ವಜನಿಕರ ಆಶಯದಂತೆ ರಾಜ್ಯ ಸರ್ಕಾರ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ವೈದ್ಯಕೀಯ ಕಾಲೇಜ ನಿರ್ಮಾಣ ಮಾಡಬೇಕೆಂದು ಹಲವಾರು ದಿನಗಳಿಂದ ವಿಜಯಪುರ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸಿ ಆಗ್ರಹಿಸಿದ್ದಾರೆ. ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ರೈತ ಸಂಘದ ಮಹಿಳಾ ಘಟಕದ ಪ್ರ. ಕಾ ರೇಣುಕಾ ಪಾಟೀಲ, ಎಸ್.ಎಸ್.ಮಸಬಿನಾಳ, ಸಾವಿತ್ರಿ ಕಂಬಾರ, ಜ್ಯೋತಿ, ದಾನಮ್ಮ ಹಿರೇಮಠ, ಪ್ರಿಯಾಂಕ, ಮುಸ್ಕಾನ್ ಬೇಪಾರಿ, ಬಿಸ್ಮಿಲ್ಲಾ ಬಿಂಜಲಬಾವಿ, ದೇಗಿನಾಳ, ಅಸ್ಮತ ನದಾಫ್ ಸೇರಿದಂತೆ ಜನ ವೇದಿಕೆ, ಜೆಎಂಜೆ ಸಂಸ್ಥೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 