ಸಂಭ್ರಮದ ಕಂಠಿ ಬಸವೇಶ್ವರ ಸ್ವಾಮಿಯ ರಥೋತ್ಸವ
Rathotsava of Basaveshwara Swami is the song of celebration
ಸಂಭ್ರಮದ ಕಂಠಿ ಬಸವೇಶ್ವರ ಸ್ವಾಮಿಯ ರಥೋತ್ಸವ
ಹೂವಿನಹಡಗಲಿ 09: ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಕಂಠಿ ಬಸವೇಶ್ವರ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.ದೇವಸ್ಥಾನದಿಂದ ಅಲಂಕೃತ ಪಲ್ಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.
ಮಹಾಮಂಗಳಾರತಿ ಬಳಿಕ ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಚಾಲನೆ ಪಡೆದುಕೊಂಡಿತು. ಸಮಾಳ, ನಂದಿಕೋಲು ಮಂಗಳವಾದ್ಯಗಳು ವಿಜೃಂಭಣೆಯ ರಥೋತ್ಸವ ಮೆರಗು ತಂದಿದ್ದವು. ರಥ ಬೀದಿಯಲ್ಲಿ ನೆರೆದಿದ್ದ ಜನರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿಯಿಂದ ಕೈ ಮುಗಿದರು. ಇದಕ್ಕೂ ಮುನ್ನ ಜರುಗಿದ ನಿಶಾನೆ ಹರಾಜಿನಲ್ಲಿ ವಿ.ಬಿ.ಮಲ್ಲಿಕೇಶ್ 1.55 ಲಕ್ಷಕ್ಕೆ ಸ್ವಾಮಿಯ ಪಟ ಪಡೆದರು. ಕಂಠಿಬಸವೇಶ್ವರ ಟ್ರಸ್ಟ್ ಕಮಿಟಿ ಅದ್ಯಕ್ಷ ವಿ.ಬಿ.ಕರಿಬಸವರಾಜಪದಾಧಿಕಾರಿಗಳು, ಗ್ರಾಮದ ಮುಖಂಡರು ಇದ್ದರು. ನಂದಿಹಳ್ಳಿ ಸುತ್ತಮುತ್ತಲ ಗ್ರಾಮಗಳ ಅಪಾರ ಜನರು ರಥೋತ್ಸವದಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 