ಕೊಪ್ಪಳ 28: ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಸಿದ್ದಾಪುರ ಕ್ಷೇತ್ರದ ಜಿ.ಪಂ. ಸದಸ್ಯ ವಿಶ್ವನಾಥರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಅಳವಂಡಿ ಕ್ಷೇತ್ರದ ಜಿ.ಪಂ. ಸದಸ್ಯೆ ರತ್ನವ್ವ ಭರಮಪ್ಪ ನಗರ ಅವರು ಆಯ್ಕೆಯಾದರು.
ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿದ್ದ ರಾಜಶೇಖರ ಹಿಟ್ನಾಳ್ ಹಾಗೂ ಉಪಾಧ್ಯಕ್ಷರಾಗಿದ್ದ ಲಕ್ಷ್ಮಮ್ಮ ಎಸ್. ನೀರಲೂಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರದಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ಜರುಗಿತು. ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷರ ಸ್ಥಾನವನ್ನು ಹಿಂದುಳಿದ "ಅ" ವರ್ಗ (ಮಹಿಳೆ) ವರ್ಗಕ್ಕೆ ಮೀಸಲಿರಿಸಲಾಗಿತ್ತು. ಜಿ.ಪಂ. ಅಧ್ಯಕ್ಷ ಸ್ಥಾನಕ್ಕೆ ವಿಶ್ವನಾಥರೆಡ್ಡಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರತ್ನವ್ವ ಬಿ.ಎನ್. ಅವರು ಮಾತ್ರ ನಾಮಪತ್ರವನ್ನು ಸಲ್ಲಿಸಿದರು. ಚುನಾವಣಾಧಿಕಾರಿ ಹಾಗೂ ಕಲಬುರಗಿ ಪ್ರಾದೇಶಿಕ ಆಯುಕ್ತ ಸುಭೋಧ ಯಾದವ್ ಅವರು ನಾಮಪತ್ರ ಪರಿಶೀಲಿಸಿದರು. ನಾಮಪತ್ರಗಳು ಕ್ರಮಬದ್ಧವಾಗಿದ್ದು, ವಿಶ್ವನಾಥರೆಡ್ಡಿ ಅವರು ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಮತ್ತು ರತ್ನವ್ವ ಭರಮಪ್ಪ ನಗರ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸುಭೋಧ ಯಾದವ್ ಅವರು ಘೋಷಿಸಿ, ನೂತನ ಅಧ್ಯಕ್ಷ/ ಉಪಾಧ್ಯಕ್ಷರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ವೆಂಕಟ್ರಾಜಾ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಜಿ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಶ್ವನಾಥರೆಡ್ಡಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಬರಗಾಲವಿದ್ದು, ಎಲ್ಲಾ ಸದಸ್ಯರ ಹಾಗೂ ಅಧಿಕಾರಿಗಳೊಂದಿಗೆ ಬರ ನಿರ್ವಹಣೆಗೆ ಶ್ರಮ ವಹಿಸಲಾಗುವುದು. ಸಕರ್ಾರಿ ಶಾಲೆಗಳ ಬಲವರ್ಧನೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಗುಳೆ ತಡೆಗಾಗಿ ಮಹಾತ್ಮ ಗಾಂದಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು. ಜಿಲ್ಲಾ ಪಂಚಾಯತಿ ಸದಸ್ಯರುಗಳು ನೂತನ ಅಧ್ಯಕ್ಷ/ ಉಪಾಧ್ಯಕ್ಷರಿಗೆ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.