ಮುಮ್ಮಿಗಟ್ಟಿ ಗ್ರಾಮದಲ್ಲಿ ಜರುಗಿದ ಓದುವ ಬೆಳಕು ಕಾರ್ಯಕ್ರಮ

ಮುಮ್ಮಿಗಟ್ಟಿ ಗ್ರಾಮದಲ್ಲಿ ಜರುಗಿದ ಓದುವ ಬೆಳಕು ಕಾರ್ಯಕ್ರಮ Reading Light Program held in Mummigatti village

ಧಾರವಾಡ ಫೆ.09: ಧಾರವಾಡ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು (ಫೆ.09) ಮುಮ್ಮಿಗಟ್ಟಿ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಓದುವ ಬೆಳಕು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.  

ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ ಅವರು ಮಾತನಾಡಿ, ವಿದ್ಯಾರ್ಥಿನಿಯರು ಆಧುನಿಕ ಯುಗದಲ್ಲಿ ಟಿವಿ, ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು, ಓದಿನ ಕಡೆಗೆ ಹೆಚ್ಚಿನ ಆಸಕ್ತಿ ವಹಿಸಿ ಏಕಾಗ್ರತೆಯಿಂದ ಓದಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. 

 ಮುಂದಿನ ಭವಿಷ್ಯದ ಕಡೆಗೆ ಹೆಚ್ಚಿನ ಒತ್ತು ನೀಡಿ, ಮುಮ್ಮಿಗಟ್ಟಿ ಗ್ರಾಮದ ಶಾಲೆಯಲ್ಲಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ 100 ರಷ್ಟು ಅಂಕ ತೆಗೆದು ತೇರ್ಗೆಡೆ ಆಗಬೇಕೆಂದು ಮಕ್ಕಳಿಗೆ ಕಿವಿಮಾತು ಹೇಳಿದರು. 

ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಲು ಸಂಜೆ 7 ಯಿಂದ ರಾತ್ರಿ 9 ಗಂಟೆವರೆಗೆ ಟಿವಿ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮೂಡಿನಲ್ಲಿ ಇಟ್ಟು, ಸರಿಯಾಗಿ ಅಭ್ಯಾಸ 7 ರಿಂದ ರಾತ್ರಿ 9 ಗಂಟೆರವರೆಗೆ ಅಭ್ಯಾಸ ಮಾಡಿ, ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ 100ಕ್ಕೆ 100 ರಷ್ಟು ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತರಬೇಕೆಂದು ಅವರು ತಿಳಿಸಿದರು. 

 ಮುಂದುವರೆದು ಬಾಲ್ಯ ವಿವಾಹ ತಡೆಗಟ್ಟಲು ಹಾಗೂ ಅದರಿಂದ ಆಗುವ ದುಷ್ಪರಿಣಾಮಗಳನ್ನು ಮಕ್ಕಳಿಗೆ ತಿಳಿಸಿ ಹೇಳಿದರು. ಮರ್ಯಾದೆ ಮನೆ ಎಂಬ ಶೌಚಾಲಯದ ಬಳಕೆ ಹಾಗೂ ನಿರ್ವಹಣೆ ಬಗ್ಗೆ ಹಾಗೂ ತ್ಯಾಜ್ಯ ನಿರ್ವಹಣೆ, ಹಸಿ ಕಸ, ಒಣ ಕಸ ಬೇರಿ​‍್ಡಸಿ ಕಸದ ವಾಹನಕ್ಕೆ ಹಾಕಬೇಕೆಂದು ಹೇಳಿದರು. 

ಈಗಾಗಲೇ ಗ್ರಾಮದಲ್ಲಿ ಸಿಸಿ ಕ್ಯಾಮೆರಾಗಳು ಅಳವಡಿಸಿದ್ದು, ಸಿಸಿ ಕ್ಯಾಮೆರಾಗಳನ್ನು ಅಳವಡಿಕೆಯಿಂದ ಗ್ರಾಮದಲ್ಲಿ ಅಹಿತಕರ ಘಟನೆಗಳನ್ನು ಹಾಗೂ ಕಳ್ಳತನಗಳನ್ನು ಹಾಗೂ ದುಶ್ಚಟಗಳನ್ನು ಕೂಡಲೇ ಪತ್ತೆ ಹಚ್ಚಬಹುದು ಎಂದು ಅವರು ಹೇಳಿದರು. 

ಈ ಸಂದರ್ಭದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಪರಶುರಾಮ ಕವಲೂರ, ಎಸ್‌.ಡಿ.ಎಂ.ಸಿ ಅಧ್ಯಕ್ಷರು, ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರು, ಎನ್‌.ಆರ್‌.ಎಲ್‌.ಎಂ ಸ್ವಸಹಾಯ ಸಂಘದ ಅಧ್ಯಕ್ಷರು, ಎಸ್‌.ಹೆಚ್‌.ಜಿ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ತಾಲೂಕು ಪಂಚಾಯತ್ ಎನ್‌.ಆರ್‌.ಎಲ್‌.ಎಂ ವಲಯ ಅಧಿಕಾರಿಗಳು ಭಾಗವಹಿಸಿದ್ದರು.