ಬಡ ದಾವೆದಾರರಿಗೆ ನ್ಯಾಯ ಒದಗಿಸಲು ಮಧ್ಯರಾತ್ರಿವರೆಗೂ ಕೂರಲು ಸಿದ್ಧ
Ready to stay up till midnight to provide justice to poor litigants
ನವದೆಹಲಿ 28: ಬಡ ದಾವೆದಾರರಿಗೆ ನ್ಯಾಯ ಒದಗಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಅವರಿಗಾಗಿ ಮಧ್ಯರಾತ್ರಿಯವರೆಗೆ ನ್ಯಾಯಾಲಯದಲ್ಲಿ ಕುಳಿತುಕೊಳ್ಳಲು ಸಿದ್ಧನಿದ್ದೇನೆ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಶುಕ್ರವಾರ ಹೇಳಿದ್ದಾರೆ.
ಕೇಂದ್ರ ಮತ್ತು ಇತರರ ವಿರುದ್ಧ ತಿಲಕ್ ಸಿಂಗ್ ಡಾಂಗಿ ಎಂಬ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಾಗ ಸಿಜೆಐ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ‘ನನ್ನ ನ್ಯಾಯಾಲಯದಲ್ಲಿ ಯಾವುದೇ ಐಷಾರಾಮಿ ಮೊಕದ್ದಮೆಗಳಿಲ್ಲ’ಎಂದು ಸಿಜೆಐ ಹೇಳಿದ್ದಾರೆ.
’ನಾನು ನಿಮಗೆ ಒಂದು ವಿಷಯವನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ಕೊನೆಯ ಸಾಲಿನಲ್ಲಿ ಕುಳಿತಿರುವ ಅತ್ಯಂತ ದುರ್ಬಲ, ಬಡ ದಾವೆದಾರರಿಗಾಗಿ ನಾನು ಇಲ್ಲಿದ್ದೇನೆ. ಅಗತ್ಯವಿದ್ದರೆ, ಅವರಿಗಾಗಿ ನಾನು ಮಧ್ಯರಾತ್ರಿಯವರೆಗೆ ಇಲ್ಲಿ ಕುಳಿತುಕೊಳ್ಳುತ್ತೇನೆ’ಎಂದು ಅವರು ಹೇಳಿದ್ದಾರೆ.
ಹರಿಯಾಣದ ಹಿಸಾರ್ ಜಿಲ್ಲೆಯ ಮಧ್ಯಮ ವರ್ಗದ ಕುಟುಂಬದಿಂದ ಬಂದ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನವೆಂಬರ್ 24ರಂದು ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸುಮಾರು 15 ತಿಂಗಳುಗಳ ಕಾಲ ಅವರು ಆ ಹುದ್ದೆಯಲ್ಲಿ ಇರುತ್ತಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 