ಮಾ.12 ರಂದು ಕುಂದು-ಕೊರತೆಗಳ ಅಹವಾಲು ಸ್ವೀಕಾರ ಮತ್ತು ಸಭೆ
Receipt and meeting of grievances on March 12th
ಮಾ.12 ರಂದು ಕುಂದು-ಕೊರತೆಗಳ ಅಹವಾಲು ಸ್ವೀಕಾರ ಮತ್ತು ಸಭೆ
ಬಳ್ಳಾರಿ 10:ಜಿಲ್ಲೆಗೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ.ಜಿ ಅವರು ಪ್ರವಾಸ ಕೈಗೊಂಡಿದ್ದು, ಮಾ.12 ರಂದು ಬೆಳಿಗ್ಗೆ 10 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಸಂಘ ಸಂಸ್ಥೆಗಳ ಮತ್ತು ಅಲೆಮಾರಿ ಸಮುದಾಯದ ಸಾಮಾನ್ಯ ಜನರಿಂದ ಕುಂದುಕೊರತೆಗಳ ಬಗ್ಗೆ ಅಹವಾಲು ಸ್ವೀಕಾರ ಮಾಡುವರು.
ನಂತರ ಅಂದು ಬೆಳಿಗ್ಗೆ 11 ಗಂಟೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾ ಅನುಷ್ಟಾನ ಸಮಿತಿಯ ಸದಸ್ಯರು, ಸದಸ್ಯಕಾರ್ಯದರ್ಶಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರು, ಸಾರ್ವಜನಿಕರು ತಮ್ಮ ಕುಂದುಕೊರತೆಗಳಿದ್ದಲ್ಲಿ ಮಾ.12 ರಂದು ಬೆಳಿಗ್ಗೆ 10:00 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿರುವ ಕುಂದು-ಕೊರತೆಗಳ ಆಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಹವಾಲು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 