ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
ಶಿಗ್ಗಾವಿ 06: ಉಪ ಲೋಕಾಯುಕ್ತ, ನ್ಯಾಯಮೂರ್ತಿಬೀ. ವೀರ್ಪ. ಫೆ.11 ರಿಂದ 15 ರವರೆಗೆ ಹಾವೇರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಾರ್ವಜನಿಕರಿಂದ ದೂರು ಹಾಗೂ ಅಹವಾಲು ಸ್ವೀಕರಿಸಲಿದ್ದಾರೆ.ಉಪ ಲೋಕಾಯುಕ್ತರ ಐದು ದಿನಗಳ ಜಿಲ್ಲಾ ಪ್ರವಾಸದಲ್ಲಿ ಶಿಗ್ಗಾವಿ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಪುರಸಭೆ ಮೂಲಕ ಪಟ್ಟಣದ ಸ್ಥಳೀಯ ಜನರಲ್ಲಿ ಮಾಹಿತಿಯನ್ನು ತಿಳಿಸಲು ಪುರಸಭೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು ಜೊತೆಗೆ ಗ್ರಾಮೀಣ ಪ್ರದೇಶದ ಜನರ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯಿತಿ ಅಧಿಕಾರಿಗಳ ಮೂಲಕ ಗ್ರಾಮಗಳಲ್ಲಿ ಡಂಗುರ ಅಥವಾ ವಾಹನಗಳ ಮೂಲಕ ಲೋಕಾಯುಕ್ತರ ಭೇಟಿಯ ಕುರಿತು ಮಾಹಿತಿ ನೀಡಲು ಸೂಚಿಸಲಾಗಿದೆ.ಜೊತೆಗೆ ತಾಲೂಕ ಆಡಳಿತದ ಅಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳು ತಮ್ಮ ಕಚೇರಿಗಳನ್ನು ಸ್ವಚ್ಛ ಹಾಗೂ ಎಲ್ಲ ದಾಖಲಾತಿಗಳನ್ನು ಸಮರ್ಕವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ.ಸಾರ್ವಜನಿಕರು ಉಪ ಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ತಹಸೀಲ್ದಾರ ರವಿ ಕೊರವರ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ ಮಣ್ಣವಡ್ಡರ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳು ಇದ್ದರು.