ಹಾವೇರಿ ಜಿಲ್ಲೆಯಲ್ಲಿ 69 ಹೊಸ ಮತಗಟ್ಟೆಗಳ ಸ್ಥಾಪನೆಗೆ ಶಿಫಾರಸು - ಜಿಲ್ಲಾಧಿಕಾರಿ
Recommendation made to set up 69 new polling stations in Haveri district: Deputy Commissioner
ಲೋಕದರ್ಶನ ವರದಿ
ಹಾವೇರಿ, ಆ.5: ಚುನಾವಣಾ ಆಯೋಗದ ನಿರ್ದೇಶನದಂತೆ 1,200ಕ್ಕೂ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪುನರ್ರಚನೆ ಹಾಗೂ ಹೊಸ ಮತಗಟ್ಟೆಗಳ ಸ್ಥಾಪನೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ತಾಲ್ಲೂಕು ತಹಶೀಲ್ದಾರರು ಮತ್ತು ಚುನಾವಣಾಧಿಕಾರಿಗಳ ಪರೀಶೀಲನೆಯ ಬಳಿಕ ಚುನಾವಣಾ ಆಯೋಗಕ್ಕೆ ಅನುಮೋದನೆಗಾಗಿ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಮತಗಟ್ಟೆಯಲ್ಲಿ ಗರಿಷ್ಠ 1,200 ಮತದಾರರಷ್ಟೇ ಇರುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರು ತಮ್ಮ ನಿವಾಸಕ್ಕೆ ಸಮೀಪದಲ್ಲೇ ಮತ ಚಲಾಯಿಸಲು ಹಾಗೂ ಮತಗಟ್ಟೆ 2 ಕಿ.ಮೀ. ವ್ಯಾಪ್ತಿಯೊಳಗೆ ಇರುವಂತೆ ಪುನರ್ರಚನೆ ನಡೆಸಲಾಗುತ್ತಿದೆ ಎಂದರು.
ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿನ ಒಟ್ಟು 1,482 ಮತಗಟ್ಟೆಗಳ ಪೈಕಿ 93 ಮತಗಟ್ಟೆಗಳಲ್ಲಿ 1,200ಕ್ಕೂ ಅಧಿಕ ಮತದಾರರಿದ್ದಾರೆ. ಈ ಹಿನ್ನೆಲೆಯಲ್ಲಿ ಹಾನಗಲ್ ಕ್ಷೇತ್ರದಲ್ಲಿ 135ಹಾಗೂ ಸೇರಿ ಒಟ್ಟು 69 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಗುರುತಿಸಲಾಗಿದೆ.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 