ಕೊಪ್ಪಳ 22: ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ಡೌನ್ ಆದೇಶ ಜಾರಿಯಲ್ಲಿದ್ದು, ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ ರೆಡ್ಡಿ ಅವರು ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದ ಗ್ರಾಮ ಪಂಚಾಯತ್ ಆವರಣದಲ್ಲಿ ಸಾರ್ವಜನಿಕರಿಗೆ ಆಹಾರದ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಸಿದ್ದಾಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಗಂಗಮ್ಮ ನಾಗನಗೌಡ ಸಿಂಧನೂರು, ಕಾರಟಗಿ ಕಾರ್ಯನಿವರ್ಾಹಕ ಅಧಿಕಾರಿ ಚಂದ್ರಶೇಖರ್, ಗಂಗಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ, ಸಿದ್ದಾಪುರ ಗ್ರಾಮ ಪಂಚಾಯತಿ ಅಧಿಕಾರಿ ಸಾಯಿನಾಥ್, ಗ್ರಾಮ ಪಂಚಾಯತಿಯ ಸದಸ್ಯರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.