ಮಕ್ಕಳ ಕಾಣೆ ಪ್ರಕರಣಗಳನ್ನು ಅಪಹರಣವೆಂದು ದಾಖಲಿಸಿ ತನಿಖೆ ಕೈಗೊಳ್ಳಿ- ಎಸ್ಪಿ
Register missing child cases as kidnappings and investigate - SP
ಮಕ್ಕಳ ಕಾಣೆ ಪ್ರಕರಣಗಳನ್ನು ಅಪಹರಣವೆಂದು ದಾಖಲಿಸಿ ತನಿಖೆ ಕೈಗೊಳ್ಳಿ- ಎಸ್ಪಿ
ಕೊಪ್ಪಳ 31 :ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಮಕ್ಕಳ ಕಾಣೆ ಪ್ರಕರಣಗಳನ್ನು “ಮಕ್ಕಳ ಅಪಹರಣ”ವೆಂದು ದಾಖಲಿಸಿ ತನಿಖೆಯನ್ನು ಕೈಗೊಳ್ಳಬೇಕು ಜಿಲ್ಲಾ ಪೊಲಿಸ್ ಅಧೀಕ್ಷಕಡಾ. ರಾಮ್‌ಎಲ್. ಅರಸಿದ್ದಿ ಹೇಳಿದರು.ಅವರು ಬುಧವಾರ ಕೊಪ್ಪಳ ಜಿಲ್ಲಾ ಪೊಲೀಸ್‌ಅಧೀಕ್ಷಕರಕಛೇರಿಯಲ್ಲಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತುಜಿಲ್ಲಾ ಮಕ್ಕಳ ರಕ್ಷಣಾಘಟಕದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ “ಅಪಹರಣಕ್ಕೊಳಗಾದ ಮತ್ತುಕಾಣೆಯಾದ ಮಕ್ಕಳ ಪತ್ತೆಗಾಗಿ ನೂತನವಾಗಿರಚನೆಯಾದ ವಿಶೇಷ ಕಾರ್ಯಪಡೆಯ” ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮಕ್ಕಳ ಕಾಣೆ ಪ್ರಕರಣಗಳನ್ನು ಸರಕಾರವುಗಂಭೀರವಾಗಿ ಪರಿಗಣಿಸಿದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ಸಹ ಮಕ್ಕಳ ಕಾಣೆ ಪ್ರಕರಣಗಳನ್ನು “ಮಕ್ಕಳ ಅಪಹರಣ”ವೆಂದು ದಾಖಲಿಸಿ ತನಿಖೆಯನ್ನು ಕೈಗೊಳ್ಳುವಂತೆ ನಿರ್ದೇಶಿಸಿದ್ದು, ಅದರನ್ವಯಜಿಲ್ಲಾ ಪೊಲೀಸ್‌ಇಲಾಖೆಯುಕಾರ್ಯನಿರ್ವಹಿಸುತ್ತಿದೆ.ಕೊಪ್ಪಳ ಜಿಲ್ಲೆಯಲ್ಲಿದಾಖಲಾಗಿರುವ ಪ್ರಕರಣಗಳನ್ನು ವಿಶ್ಲೇಷಿಸಲಾಗಿದ್ದು, ಅದರಲ್ಲಿ ಬಹುತೇಕವುಗಳು ಪ್ರೇಮ ಪ್ರಕರಣಗಳಾಗಿವೆ ಎಂದರು.ಅಪರಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರು ಮಾತನಾಡಿ, ಶಾಲಾ ಮತ್ತು ಕಾಲೇಜುಗಳ ವ್ಯಾಪ್ತಿಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಪರವಾದ ಕಾನೂನುಗಳ ಕುರಿತು ಜಾಗೃತಿಯನ್ನು ಮೂಡಿಸಬೇಕು ಎಂದು ಪೊಲೀಸ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶದರಗದಅವರು ಮಾತನಾಡಿ, ಮಕ್ಕಳಿಗೆ ಮಕ್ಕಳ ಪರವಾದ ಕಾನೂನುಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಮೂಲಕ ಅವರನ್ನು ಪ್ರಜ್ಞಾವಂತರಾಗಿಸುವ ಮೂಲಕ ಮಕ್ಕಳ ಮೇಲಾಗುವ ವಿವಿಧರೀತಿಯ ಅಪರಾಧಗಳನ್ನು ತಡೆಗಟ್ಟಬಹುದಾಗಿದೆಂದರು.
ಈ ಸಭೆಯಲ್ಲಿ ಹೆಚ್ಚುವರಿಜಿಲ್ಲಾ ಪೊಲೀಸ್‌ಅಧೀಕ್ಷಕ ಹೇಮಂತಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ್ ಶೆಟ್ಟೆಪ್ಪನವರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಅಧ್ಯಕ್ಷರಾದ ಪ್ರಕಾಶಕಡಗದ್, ಸದಸ್ಯೆ ದಿವ್ಯಾಜೋಗಿ, ಬಾಲ ನ್ಯಾಯ ಮಂಡಳಿಯ ಸದಸ್ಯರಾದರವಿ ಗುಡ್ಡದಮೇಗಳ, ನೇತ್ರಾ ಪಾಟೀಲ್, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿ ಆಶಾ, ಜೈಕುಮಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾಇಲಾಖೆಯಡಿ.ಪಿ.ಓ ಬಸವರಾಜ ಸೇರಿದಂತೆ ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾಘಟಕದ ಸಿಬ್ಬಂದಿಗಳು ಮತ್ತುಕಾಣೆಯಾದ ಮಕ್ಕಳ ಪಾಲಕರು ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಘಟಕದರಕ್ಷಣಾಧಿಕಾರಿ(ಅಸಾಂಸ್ಥಿಕ) ಪ್ರಶಾಂತರೆಡ್ಡಿಅವರುಕೊನೆಯಲ್ಲಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 