ನಿಯಮಿತ ಆರೋಗ್ಯ ತಪಾಸಣೆಯಿಂದ ರೋಗ ತಡೆಗಟ್ಟಲು ಸಾಧ್ಯ -ಡಾ.ಚೇತನ ಯಲಿಗಾರ
Regular health check-ups can prevent disease - Dr. Chetana Yaligara
ಹಾವೇರಿ 28 : ಇಂದಿನ ಒತ್ತಡದ ಜೀವನ ಶೈಲಿಯಿಂದ ಬಹುತೇಕ ಜನರು ತಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುತ್ತಿಲ್ಲ. ಪ್ರತಿಯೊಬ್ಬರೂ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮುಂದೆ ಬರುವ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚೇತನ ಎಲಿಗಾರ ಹೇಳಿದರು. ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಬುಧವಾರ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕುಮಾರಿ ವಿನಯ ಕಾಟೋಕರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆರೋಗ್ಯದ ಬಗ್ಗೆ ಅತಿಯಾದ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇಂತಹ ಉಚಿತ ಶಿಬಿರಗಳ ಪ್ರಯೋಜನ ಪಡೆದುಕೊಂಡು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ, ಗಂಭೀರ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಗುಣಪಡಿಸಬಹುದು ಎಂದು ಸಲಹೆ ನೀಡಿದರು. ಶಿಬಿರದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಯ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ಚಿಕಿತ್ಸೆ ನೀಡಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ, ಆರ್‌ಟಿಒ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 