ಬಹುಕಾಲದ ಗೆಳತಿಯನ್ನು ವರಿಸಲಿರುವ ರೆಹನ್ ವಾದ್ರಾ
Rehan Vadra to marry longtime girlfriend
ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಅವರ ಪುತ್ರ ರೆಹನ್ ವಾದ್ರಾ ಅವರು ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರಿಗೆ ಪ್ರೇಮ ನಿವೇದನೆ ಮಾಡಿದ್ದು, ಇವರ ಪ್ರೀತಿಗೆ ಎರಡೂ ಕುಟುಂಬದವರು ಒಪ್ಪಿಗೆ ಸೂಚಿಸಿರುವುದಾಗಿ ವರದಿಯಾಗಿದೆ.
ಮೂಲಗಳ ಪ್ರಕಾರ, ರೆಹನ್ ಮತ್ತು ಅವಿವಾ ಕಳೆದ 7 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಈ ವಿಚಾರವನ್ನು ಪೋಷಕರಿಗೆ ತಿಳಿಸಿದ್ದು, ಅದಕ್ಕೆ ಅವರೂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಅವಿವಾ ಅವರು ಇಮ್ರಾನ್ ಬೇಗ್ ಹಾಗೂ ನಂದಿತಾ ಬೇಗ್ ದಂಪತಿಯ ಮಗಳು. ಮಾಧ್ಯಮ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ತಮ್ಮ ಆರಂಭಿಕ ಶಿಕ್ಷಣವನ್ನು ದೆಹಲಿಯಲ್ಲೇ ಪೂರ್ಣಗೊಳಿಸಿದ್ದಾರೆ.
ರೆಹನ್ ವಾದ್ರಾ ಅವರಂತೆ ಅವಿವಾ ಕೂಡ ಸೃಜನಶೀಲ ಕಲೆಗಳಲ್ಲಿ ವೃತ್ತಿಜೀವನ ರೂಪಿಸಿಕೊಂಡಿದ್ದಾರೆ. ರಾಜಕೀಯ ಪ್ರಚಾರದಿಂದ ಇವರು ದೂರ ಉಳಿದಿರುವ ಇವರು, ದೆಹಲಿ ಮೂಲದ ಛಾಯಾಗ್ರಾಹಕಿ. ಮಾತ್ರವಲ್ಲ, ಛಾಯಾಗ್ರಹಣ ಸ್ಟುಡಿಯೋ ಮತ್ತು ನಿರ್ಮಾಣ ಕಂಪನಿಯಾಗಿರುವ ಅಟೆಲಿಯರ್ 11ರ ಸಹ ಸಂಸ್ಥಾಪಕಿ ಕೂಡ.ಅವಿವಾ ಪ್ರಸ್ತುತ ವೃತ್ತಿಪರ ಛಾಯಾಗ್ರಾಹಕಿ ಮತ್ತು ನಿರ್ಮಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ ಮಾತ್ರವಲ್ಲ, ಅವರು ಫುಟ್ಬಾಲ್ ಆಟಗಾರ್ತಿ ಕೂಡ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 