ಸಕ್ರೀಯ ಟಿಬಿ ಪತ್ತೆ ಆಂದೋಲನ ಪ್ರಚಾರ ಸಾಮಗ್ರಿ ಬಿಡುಗಡೆ

ಗದಗ 27:  ಪರೀಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಜನೇವರಿ 2ರಿಂದ 12 ವರೆಗೆ ನಡೆಯಲಿರುವ ಕ್ಷಯರೋಗ ಪತ್ತೆ ಎಸಿಎಫ್ ಆಂದೋಲನದ ಪೂರ್ವಭಾವಿ ಸಭೆಯು ಬುಧವಾರ ದಿ. 26ರಂದು  ಗದಗ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಅಧ್ಯಕ್ಷತೆಯಲ್ಲಿ ಜರುಗಿತು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಕ್ಷಯರೋಗ ಪತ್ತೆ ಆಂದೋಲನದ ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಹಾಗೂ ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು ಮತ್ತು ಆರ್ಎನ್ಟಿಸಿಪಿ ಸಿಬ್ಬಂದಿಯವರು ಹಾಜರಿದ್ದರು.