ಧಾರ್ಮಿಕ ಮುಖಂಡ ಖಾಜಿ ಅವರಿಂದ ಚನ್ನಬಸವ ಶ್ರೀಗಳಿಗೆ ಶ್ರದ್ಧಾಂಜಲಿ
Religious leader Qazi pays tribute to Channabasava Sri
ತಾಳಿಕೋಟಿ 12: ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ವಚನ ಶಿಲಾ ಮಂಟಪದ ಪೀಠಾಧಿಪತಿ ಚನ್ನಬಸವ ಮಹಾಸ್ವಾಮಿಗಳ ನಿಧನಕ್ಕೆ ತಾಳಿಕೋಟಿ ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಗುರುವಾರ ಇಂಗಳೇಶ್ವರದ ವಚನ ಶಿಲಾ ಮಂಟಪಕ್ಕೆ ಭೇಟಿ ನೀಡಿದ ಅವರು ಮಠಾಧೀಶರೊಂದಿಗೆ ಸೇರಿ ಲಿಂಗೈಕ್ಯ ಚನ್ನಬಸವ ಶ್ರೀಗಳ ಪಾರ್ಥಿವ ಶರೀರಕ್ಕೆ ಪುಷ್ಾರೆ್ಪಣ ಅರ್ಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು ಕಳೆದ 30 ವರ್ಷಗಳಿಂದ ನಮ್ಮೊಂದಿಗೆ ಸ್ನೇಹಪರ ಸಂಬಂಧವನ್ನು ಹೊಂದಿದ್ದ ಶ್ರೀಗಳು ಮತ್ತು ನಾನು ಸಾಕಷ್ಟು ಕಾರ್ಯಕ್ರಮಗಳಲ್ಲಿ ವೇದಿಕೆಯನ್ನು ಹಂಚಿಕೊಂಡಿದ್ದೇವೆ. ಅವರೊಬ್ಬ ಅಪ್ಪಟ ಬಸವ ಅನುಯಾಯಿ, ತಮ್ಮ ಮಠದಲ್ಲಿ ಸಾವಿರಾರು ವಚನಗಳನ್ನು ಗೋಡೆಗಳಲ್ಲಿ ಬರೆಯಿಸಿ ನಿರಂತರ ಪ್ರಚಾರವನ್ನು ಮಾಡಿದವರು. ಅತ್ಯಂತ ಸರಳ ವ್ಯಕ್ತಿತ್ವದ ನೇರ ನಿಷ್ಠುರ ನುಡಿಗಳಿಗೆ ಹೆಸರುವಾಸಿಗಳಾಗಿದ್ದರು.
ಅವರ ಅಗಲುವಿಕೆ ಧಾರ್ಮಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದರು.ಮುಸ್ಲಿಂ ಸಮಾಜದ ಗಣ್ಯರಾದ ಅಬ್ದುಲ್ ರೆಹಮಾನ ಎಕೀನ, ಮೆಹಬೂಬ ಚೋರಗಸ್ತಿ, ಮುರ್ತುಜಾಸಾಬ ಮೇತ್ರಿ(ಇಂಜನೀಯರ), ನಜೀರ ಚೋರಗಸ್ತಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 