ಲೋಕದರ್ಶನ ವರದಿ
ಬೆಳಗಾವಿ 25: ಸುವರ್ಣ ವಿಧಾನಸೌಧಕ್ಕೆ ಬೆಂಗಳೂರಿನಲ್ಲಿರುವ ಪ್ರಮುಖ ನಾಲ್ಕೈದು ಸರಕಾರಿ ಕಚೇರಿಗಳ ಸ್ಥಳಾಂತರವನ್ನು ಸಿಎಂ ಯಡಿಯೂರಪ್ಪನವರು ಶೀಘ್ರದಲ್ಲೇ ಸ್ಥಳಾಂತರ ಮಾಡಲಿದ್ದಾರೆ ಎನ್ನುವ ವಿಶ್ವಾಸ ಇದೆ ಎಂದು ರಾಜ್ಯ ಬಿಜೆಪಿ ಯುವಮೋಚರ್ಾ ಪ್ರಧಾನ ಕಾರ್ಯದಶರ್ಿ ಬಿ.ವೈ.ವಿಜಯೇಂದ್ರ ಹೇಳಿದರು.
ಶನಿವಾರ ನಗರದ ಲಕ್ಷ್ಮೀ ಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಶ್ರೀಮಠ ಗೌರವ ಸ್ವೀಕರಿಸಿದ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಉತ್ತರ ಕನರ್ಾಟಕದ ಮಠಾಧೀಶರದಾದ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಗದುಗಿನ ತೋಂಟದಾರ್ಯ ಡಾ.ಸಿದ್ದರಾಮ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಮಠಾಧೀಶರು ಬೆಳಗಾವಿ ಸುವರ್ಣ ಸೌಧದ ಎದುರು ಶಾಂಕೇತಿಕವಾಗಿ ಧರಣಿ ನಡೆಸಿ ವಿವಿಧ ಸರಕಾರಿ ಕಚೇರಿಗಳನ್ನು ಸ್ಥಳಾಂತರ ಮಾಡಬೇಕೆಂದು ಬೇಡಿಕೆ ಇಟ್ಟಿದ್ದರು. ಅದರಂತೆ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಬಿ.ಎಸ್.ಯಡಿಯೂರಪ್ಪನವರಿಗೂ ಮನವಿ ಸಲ್ಲಿಸಿದ್ದರು. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸಿಎಂ ಯಡಿಯೂರಪ್ಪನವರು ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಸರಕಾರಿ ಕಚೇರಿ ಸ್ಥಳಾಂತರ ಮಾಡುವ ಚಿಂತನೆ ನಡೆಸಿದ್ದರು. ಶೀಘ್ರದಲ್ಲೇ ನಾಲ್ಕೈದು ಕಚೇರಿ ಸ್ಥಳಾಂತರ ಮಾಡಲಿದ್ದಾರೆ ಎನ್ನುವ ವಿಶ್ವಾಸ ಇದೆ ಎಂದರು.
ಉತ್ತರ ಕನರ್ಾಟಕದ ಜನರ ಆಶೋತ್ತರ, ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಬಿ.ಎಸ್.ಯಡಿಯೂರಪ್ಪನವರು ಯಾವ ಸರಕಾರವು ಮಾಡಿರದನ್ನು ಸುಮಾರು 490 ಕೋಟಿ ರೂ. ವೆಚ್ಚದಲ್ಲಿ ಸುವರ್ಣವಿಧಾನ ಸೌಧವನ್ನು ನಿಮರ್ಾಣ ಮಾಡಿದರು. ಅದರಂತೆ ಈ ಭಾಗದ ಅಭಿವೃದ್ಧಿಗೆ ಸಿಎಂ ಬದ್ಧರಾಗಿದ್ದಾರೆ ಎಂದರು.
ಬೆಂಗಳೂರು ಮಹಾನಗರ ಬಿಟ್ಟರೆ ಬೆಳಗಾವಿ ಜಿಲ್ಲೆ 18 ವಿಧಾನಸಭಾ ಕ್ಷೇತ್ರವನ್ನು ಹೊಂದಿರುವ ಅತಿ ದೊಡ್ಡ ಜಿಲ್ಲೆ. ಬೆಳಗಾವಿ ಜಿಲ್ಲೆಯಿಂದ ದೊಡ್ಡ ಮಟ್ಟದಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಿದ್ದಾರೆ. ಈ ಜಿಲ್ಲೆಗೆ ಹೆಚ್ಚಿನ ಸಚಿವ ಸ್ಥಾನ ಸಿಗಬೇಕೆಂಬ ನಿರೀಕ್ಷೆ ಎಲ್ಲರಲ್ಲಿಯೂ ಇದೆ. ಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ಬಿಜೆಪಿ ರಾಷ್ಟ್ರೀಯ ನಾಯಕರು, ಸಿಎಂ ಎಲ್ಲರೂ ಚಚರ್ೆ ಮಾಡಿ ಹೆಚ್ಚಿನ ಪ್ರಾಸಸ್ತ್ಯ ಬೆಳಗಾವಿ ಜಿಲ್ಲೆಗೆ ಕೊಡುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು.
ರಾಜ್ಯದಲ್ಲಿ ವಿರೋಧ ಪಕ್ಷ ಇಲ್ಲವೆ ಇಲ್ಲ. ಕಾಂಗ್ರೆಸ್ ಕೆಪಿಸಿಸಿ, ವಿರೋಧ ಪಕ್ಷದ ನಾಯಕನ ಆಯ್ಕೆಯ ವಿಚಾರದಲ್ಲಿ ಸಾಕಷ್ಟು ಗೊಂದಲ ಇದೆ. ತಮ್ಮ ಮನೆಯನ್ನು ಸರಿ ಪಡಿಸಿಕೊಳ್ಳದವರು ಸಿಎಂ ಯಡಿಯೂರಪ್ಪನವರ ಸರಕಾರಕ್ಕೆ ಕಂಟಕ ಇದೆ ಎಂದು ಹೇಳಿಕೆ ನೀಡುವುದು ಸರಿಯಲ್ಲ. ಸಿಎಂ ಯಡಿಯೂರಪ್ಪನವರ ಸರಕಾರಕ್ಕೆ ಯಾವುದೇ ಕಂಟಕ ಇಲ್ಲ. ರಾಜ್ಯ ಸರಕಾರ ಸುಭದ್ರವಾಗಿದೆ. ಬರುವ ಮೂರು ವರ್ಷದಲ್ಲಿ ರಾಜ್ಯದ ಜನತೆಗೆ ಒಳ್ಳೆಯ ಆಡಳಿತ ನೀಡವ ನಿಟ್ಟಿನಲ್ಲಿ ಕೆಲಸ ಮಾಡಿ ಯಶಸ್ವಿಯಾಗಲಿದೆ ಎಂದರು.
ಬೆಳಗಾವಿ ಜಿಲ್ಲೆಗೆ ಬರುವುದತ್ತಿರುವುದು ನಾನು ಮೊದಲ ಬಾರಿಗೆ. ನಮ್ಮ ತಂದೆ ಸಿಎಂ ಯಡಿಯೂರಪ್ಪನವರು ಹುಕ್ಕೇರಿ ಹಿರೇಮಠದ ಶ್ರೀಗಳ ಆಶೀವರ್ಾದ ಪಡೆದಿದ್ದಾರೆ. ಶ್ರೀಗಳ ಆಶೀವರ್ಾದ ಹಾಗೂ ಅವರು ತೋರುವ ಮಾರ್ಗದರ್ಶನದಲ್ಲಿ ನಡೆಯುವುದಾಗಿ ಹೇಳಿದರು.
ಹುಕ್ಕೇರಿ ಹಿರೇಮಠ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಬಿ.ವೈ.ವಿಜಯೇಂದ್ರ ಹುಕ್ಕೇರಿ ಹಿರೇಮಠಕ್ಕೆ ಮೊದಲ ಬಾರಿ ಆಗಮಿಸಿದ್ದರೂ ಈ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ರಾಜಕೀಯ ಜೀವನದಲ್ಲಿ ಅವರು ಇನಷ್ಟು ಹೆಚ್ಚಿನ ಹುದ್ದೆ ಅಲಂಕರಿಸಲಿ ಎಂದು ಆಶೀವರ್ಾದ ಮಾಡಿದರು.
ಸಿಎಂ ರಾಜಕೀಯ ಕಾರ್ಯದಶರ್ಿ ಶಂಕರಗೌಡ ಪಾಟೀಲ, ಅಲ್ಪ ಸಂಖ್ಯಾತ ನಿಗಮ ಮಂಡಳದ ಅಧ್ಯಕ್ಷ ಮುಕ್ತಾರ ಪಠಾಣ, ಶಾಸಕ ಅನಿಲ್ ಬೆನಕೆ, ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ, ಬಿಜೆಪಿ ನಗರ ಘಟಕದ ಪ್ರಧಾನ ಕಾರ್ಯದಶರ್ಿ ರಾಜಕುಮಾರ ಟೋಪಣ್ಣವರ, ಬಿಜೆಪಿ ಮುಖಂಡರಾದ ಎಂ.ಬಿ.ಜೀರಲಿ, ಆನಂದ ದೇಸಾಯಿ, ಕಿರಣ ಜಾಧವ, ದೀಪಾ ಕುಡಚಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.