ಉಮಾ ವಿದ್ಯಾಲಯ ಮೈದಾನಕ್ಕೆ ಪಟಾಕಿ ಅಂಗಡಿಗಳ ಸ್ಥಳಾಂತರ
Relocation of firecracker stalls to Uma Vidyalaya grounds
ಲಕ್ಷ್ಮೇಶ್ವರ, ಸೆ.15: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆ ಪ್ರದೇಶದಲ್ಲಿರುವ ಪಟಾಕಿ ಅಂಗಡಿಗಳಿಂದ ಸಾರ್ವಜನಿಕರಿಗೆ ಯಾವುದೇ ಅಪಾಯವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪಟಾಕಿ ಅಂಗಡಿಗಳನ್ನು ಉಮಾ ವಿದ್ಯಾಲಯದ ಹೈಸ್ಕೂಲ್ ಮೈದಾನಕ್ಕೆ ಸ್ಥಳಾಂತರಿಸುವಂತೆ ಪುರಸಭೆ ಅಧಿಕಾರಿಗಳು ಸೂಚಿಸಿದ್ದಾರೆ.
ಮಾರುಕಟ್ಟೆಯಲ್ಲಿದ್ದ ಪಟಾಕಿ ಅಂಗಡಿಗಳನ್ನು ಪರೀಶೀಲಿಸಿದ ಪುರಸಭೆ ಅಧಿಕಾರಿಗಳು, ಪಟಾಕಿ ಮಾರಾಟವನ್ನು ಸುರಕ್ಷಿತ ಸ್ಥಳದಲ್ಲಿ ನಡೆಸುವಂತೆ ಅಂಗಡಿ ಮಾಲೀಕರಿಗೆ ಸೂಚಿಸಿದರು. ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಅವರ ಸಲಹೆಯ ಮೇರೆಗೆ ಹಿರಿಯ ಆರೋಗ್ಯ ನೀರೀಕ್ಷಕ ಮಂಜುನಾಥ ಮುದುಕಲ್, ಹನುಮಂತಪ್ಪ ನಂದಣ್ಣವರ, ಪರಶುರಾಮ ನಂದಣ್ಣವರ ಹಾಗೂ ಪೊಲೀಸ್ ಠಾಣೆಯ ಎಎಸ್‌ಐ ವೈ.ಸಿ. ದೊಡ್ಡಮನಿ ಅವರು ಅಂಗಡಿಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಮಾರುಕಟ್ಟೆ ಪ್ರದೇಶದಲ್ಲಿ ಪಟಾಕಿ ಮಾರಾಟ ನಡೆಸುತ್ತಿದ್ದರೆ ಅಪಾಯ ಸಂಭವಿಸುವ ಸಾಧ್ಯತೆ ಇರುವುದರಿಂದ ಸೋಮವಾರ ಬೆಳಗ್ಗೆಯಿಂದಲೇ ಉಮಾ ವಿದ್ಯಾಲಯದ ಹೈಸ್ಕೂಲ್ ಮೈದಾನದಲ್ಲಿ ಅಂಗಡಿಗಳನ್ನು ತೆರೆಯುವಂತೆ ಅಧಿಕಾರಿಗಳು ಸೂಚಿಸಿದರು. ಇದಕ್ಕೆ ಪಟಾಕಿ ಅಂಗಡಿ ಮಾಲೀಕರು ಒಪ್ಪಿಗೆ ಸೂಚಿಸಿ, ಮೈದಾನದಲ್ಲಿ ಪಟಾಕಿ ಮಾರಾಟ ಆರಂಭಿಸಿದರು.
ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ ಪಟಾಕಿ ಅಂಗಡಿಗಳನ್ನು ಜನನಿಬಿಡ ಮಾರುಕಟ್ಟೆ ಪ್ರದೇಶದಿಂದ ಸ್ಥಳಾಂತರಿಸಿರುವ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 