ಗಣರಾಜ್ಯೋತ್ಸವ: ಸಾಧಕರಿಗೆ ಸನ್ಮಾನ

Republic Day: Tribute to achievers

ಗಣರಾಜ್ಯೋತ್ಸವ: ಸಾಧಕರಿಗೆ ಸನ್ಮಾನ

ಇಂಡಿ 27 : ಪಟ್ಟಣದ ತಾಲೂಕ ಕ್ರೀಡಾಂಗಣದಲ್ಲಿ ತಾಲೂಕ ಆಡಳಿತ ವತಿಯಿಂದ ಜರುಗಿದ ಗಣರಾಜ್ಯೋತ್ಸವದ ಸಮಾರಂಭದಲ್ಲಿ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕಸಂತೋಷ ಬಂಡೆ ಅವರ ಅನುಪಮ ಶೈಕ್ಷಣಿಕ, ಸಾಂಸ್ಕೃತಿಕ ಸೇವೆಯ ಸಾಧನೆಗಾಗಿ ಹಾಗೂ ಬಂಥನಾಳದ ಸಂಗನಬಸವ ಸ್ವಾಮೀಜಿ ಅವರ ಪ್ರೇರಣೆಯಿಂದ ಪಡನೂರ ಗ್ರಾಮದ ನಿವೃತ್ತ ಶಿಕ್ಷಕ ಸಂಗಣ್ಣ ಭೈರಜಿ ಅವರು ವಿಜಯಪುರದ ಬಿ ಎಲ್ ಡಿ ಈ ಆಸ್ಪತ್ರೆಗೆ ದೇಹದಾನ ಮಾಡಿದ್ದಕ್ಕಾಗಿ ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ವ್ಹಿ ಪಾಟೀಲ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ತಹಸೀಲ್ದಾರ ಬಿ ಎಸ್ ಕಡಕಭಾವಿ, ಪೊಲೀಸ್ ಉಪಾಧಿಕ್ಷಕ ಜಗದೀಶ ಎಚ್ ಎಸ್, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ ರಾಠೋಡ, ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ, ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಬಸವರಾಜ ರಾವೂರ, ಬಸವರಾಜ ಗೊರನಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.