ರೋಣ ತಾಲೂಕ ಪಂಚಾಯತ ಆವರಣದಲ್ಲಿ ಸಂಭ್ರಮದ ಗಣರಾಜ್ಯೋತ್ಸವ
ರೋಣ 26 : ಗಣರಾಜ್ಯೋತ್ಸವ ಅಂಗವಾಗಿ ತಾಲೂಕ ಪಂಚಾಯತ ಆವರಣದಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ ಕಂದಕೂರ ಧ್ವಜಾರೋಹಣ ನೆರವೇರಿಸಿದರು. ಈ ಮೂಲಕ 76 ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಕಾರ್ಯ ನಿರ್ವಾಹಕ ಅಧಿಕಾರಿಗಳು 1946ರ ಕ್ಯಾಬಿನೆಟ್ ಮಿಷನ್ ಶಿಫಾರಸಿನಂತೆ, ಸಂವಿಧಾನವು ರೂಪು ರೇಷೆಗಳನ್ನು ಪಡೆದು, ಡಾಕ್ಟರ್ ಬಿ.ಆರ್ ಅಂಬೇಡ್ಕರ್ ರವರಿಂದ ರಚನೆಯಾಗಿ 1950 ಜನವರಿ 26ರಂದು ಜಾರಿಯಾಗಿ, ಭಾರತದಲ್ಲಿರುವ ಹಲವು ಧರ್ಮಿಯರಿಗೆ , ಸ್ವಾತಂತ್ರ್ಯ ಸಮಾನತೆ, ಹಕ್ಕುಗಳನ್ನು ಒಳಗೊಂಡಂತೆ ಏಕರೂಪದ ನಿಯಮಗಳನ್ನು ನೀಡಿ, ಒಂದೇ ಸೂತ್ರದಲ್ಲಿ ಎಲ್ಲಾ ರಾಜ್ಯಗಳು ಸ್ವತಂತ್ರವಾಗಿ ಒಕ್ಕೂಟ ವ್ಯವಸ್ಥೆಯು ಜಾರಿಗೆ ಬಂದಿತು ಈ ಹಿನ್ನೆಲೆ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದರು. 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯರ ಪಾಲಿಗೆ ಹೆಮ್ಮೆಯ ದಿನ. ಸ್ವಾತಂತ್ರ್ಯ ದಿನಾಚರಣೆ ಯನ್ನು ಎಷ್ಟು ಸಂಭ್ರಮ, ದೇಶಭಕ್ತಿ ಗಳಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ ಆಚರಿಸಬೇಕು ಯಾಕೆಂದರೆ ಆ.15 ಬ್ರಿಟಿಷರಿಂದ ತಾತ್ವಿಕವಾಗಿ ಸ್ವಾತಂತ್ರ್ಯ ಪಡೆದುಕೊಂಡ ದಿನವಾದರೆ, ಜ.26 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನ. ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನ. ಈ ಕಾರಣಕ್ಕಾಗಿ ಗಣರಾಜ್ಯೋತ್ಸವ ನಮ್ಮೆಲ್ಲರ ಪಾಲಿಗೆ ಅತ್ಯಂತ ಮಹತ್ವದ ದಿನ. ಭಾರತ ತನ್ನದೇ ಆದ ಸಂವಿಧಾನವನ್ನು ಜಾರಿಗೆ ತರುತ್ತಿದ್ದಂತೆಯೇ ಪ್ರಜಾಪ್ರಭುತ್ವ ಗಣರಾಜ್ಯ ವಾಗಿ ಬದಲಾಯಿತು ಎಂದರು ಈ ಸಂದರ್ಭದಲ್ಲಿ ತಾಲೂಕ ಮಟ್ಟದ ವಿವಿಧ ಅಧಿಕಾರಿಗಳು, ತಾಲೂಕ ಪಂಚಾಯತ ಸಿಬ್ಬಂದಿಗಳು, ನರೇಗಾ ಸಿಬ್ಬಂದಿಗಳು ಹಾಗೂ ಎನ್ ಆರ್ ಎಲ್ ಎಂ ಸಿಬ್ಬಂದಿಗಳು ಹಾಜರಿದ್ದರು..