ದಾಂಡೇಲಿಯ ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ
Republic Day pre-meeting at the Administrative Building in Dandeli
ದಾಂಡೇಲಿ .ಜ. 23: ದಾಂಡೇಲಿಯ ಅಂಬೇವಾಡಿಯಲ್ಲಿರುವ ತಾಲೂಕಾಡಳಿತ ಸೌಧದಲ್ಲಿ ತಹಶೀಲದಾರ ಶೈಲೇಶ ಪರಮಾನಂದ ಅಧ್ಯಕ್ಷತೆಯಲ್ಲಿ ಹಳೇ ನಗರಸಭೆಯ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಕಾರ್ಯಕ್ರಮದ ಕುರಿತಂತೆ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸುವ ಕುರಿತು ಸಮಾಲೋಚನೆ ನಡೆಸಲಾಯಿತು. ಗಣರಾಜ್ಯೋತ್ಸವದ ದಿನದಂದು ಎಲ್ಲ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಸರ್ಕಾರದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಯಾಗಿ ಗಣರಾಜ್ಯೋತ್ಸವ ಆಚರಿಸಬೇಕೆಂದು ನಿರ್ಧರಿಸಲಾಯಿತು. ಸಭೆಯಲ್ಲಿ ತಾಲೂಕಾ ಪಂಚಾಯತ ಇ.ಓ ಟಿ.ಸಿ ಹಾದಿಮನಿ, ಪೌರಾಯುಕ್ತ ವಿವೇಕ್ ಬನ್ನೆ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಚವ್ಹಾಣ, ನಗರಸಭೆ ನಿಕಟ ಪೂರ್ವ ಅಧ್ಯಕ್ಷ ಅಷ್ಪಾಕ ಶೇಖ, ಮಾಜಿ ನಗರಸಭಾ ಅಧ್ಯಕ್ಷೆ ಸರಸ್ವತಿ ರಜಪೂತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ಜಿಲ್ಲಾ ಕ.ಸಾ.ಪ ಅಧ್ಯಕ್ಷ ಬೊಮ್ಮಯ್ಯ ವಾಸರೆ ನಗರಸಭಾ ಸದಸ್ಯರು, ಮತ್ತಿತರ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 