ಗದಗ 03: ಜಿಲ್ಲಾಡಳಿತದಿಂದ ಜ. 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಶಿಸ್ತು ಹಾಗೂ ಸಂಭ್ರಮದಿಂದ ಆಚರಿಸಲು ಅಗತ್ಯದ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದರು.
ಗದಗ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣರಾಜ್ಯೋತ್ಸವ ರಾಷ್ಟ್ರೀಯ ಹಬ್ಬವಾಗಿದ್ದು ಎಲ್ಲ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಯಾವುದೇ ರೀತಿ ಲೋಪಗಳಾಗದಂತೆ ಸರಿಯಾಗಿ ನಿರ್ವಹಿಸಬೇಕು ಎಂದರು. ಈ ಸಂದರ್ಭದಲ್ಲಿ ಜರುಗುವ ಪಥ ಸಂಚಲನ ದಳಗಳ ಆಯ್ಕೆ, ಸಚಿವರ ಸಂದೇಶ , ಬಹುಮಾನ ವಿತರಣೆ , ಸಾಧಕರಿಗೆ ಸನ್ಮಾನ, ಆಮಂತ್ರಣ ಪತ್ರಿಕೆ ಮುದ್ರಣ, ಪ್ರಮುಖ ವೃತ್ತಗಳ ದೀಪಾಲಂಕಾರ, ಕ್ರೀಡಾಂಗಣ ಹಾಗೂ ಸಾಯಂಕಾಲ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಚಚರ್ಿಸಲಾಯಿತು. ಈ ಕುರಿತು ಸಂಬಂಧಿತ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು. ಸಮಾರಂಭವನ್ನು ವ್ಯವಸ್ಥಿತವಾಗಿ ಜವಾಬ್ದಾರಿಯಿಂದ ಅಧಿಕಾರಿಗಳು ಹಾಗೂ ಸಮಿತಿಗಳು ಸಮನ್ವಯತೆಯಿಂದ ಕರ್ತವ್ಯ ನಿಭಾಯಿಸಬೇಕು. ಒಟ್ಟಾರೆಯಾಗಿ ಈ ಬಾರಿ ಪ್ರಜಾರಾಜ್ಯೋತ್ಸವ ಸಮಾರಂಭವನ್ನು ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮಾತನಾಡಿ ಇಡೀ ಕಾರ್ಯಕ್ರಮದಲ್ಲಿ ಇಲಾಖೆಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತು ವಿವರಿಸಿದರು. ಸಾರ್ವಜನಿಕರಲ್ಲಿ ಗಣರಾಜ್ಯೋತ್ಸವದ ಕುರಿತು ಜಾಗೃತಿ ಮೂಡಿಸಲು ದಿ. 26ರಂದು ಮುಂಜಾನೆ 7-30 ಗಂಟೆಗೆ ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹನ ನಂತರ ವಿದ್ಯಾಥರ್ಿಗಳಿಂದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದವರೆಗೆ ಪ್ರಭಾತಫೇರಿ ಹಮ್ಮಿಕೊಳ್ಳುವಂತೆ ಸಾರ್ವಜನಿಕ ಹಾಗೂ ಪ.ಪೂ.ಶಿಕ್ಷಣ ಇಲಾಖೆ ಉಪನಿದರ್ೇಶಕರು ಕ್ರಮಜರುಗಿಸಬೇಕು. ಸಮಾರಂಭದಲ್ಲಿ ಪಥ ಸಂಚಲನ, ಗೌರವರಕ್ಷ ನೀಡುವ ವಿವಿಧ ದಳಗಳು ಪೂರ್ವಭಾವಿ ತಾಲೀಮು ನಡೆಸಲು, ಸಮಾರಂಭದಂದು ಸನ್ಮಾನಗೊಳ್ಳಬೇಕಾದವರ ಆಯ್ಕೆಗೆ ಸಮಿತಿ ಕ್ರಮ ಜರುಗಿಸಲು, ಸಾಂಸ್ಕೃತಿಕ ಕಾರ್ಯಕ್ರಮಗಳ ಎಪರ್ಾಡು ಅಲ್ಲದೆ, ಜ. 26 ರಂದು ಮುಂಜಾನೆ 7-30 ಗಂಟೆಗೆ ಎಲ್ಲ ಶಾಲೆ, ಕಾಲೇಜು, ಸಕರ್ಾರಿ ಕಚೇರಿ ಹಾಗೂ ಸಂಘ ಸಂಸ್ಥೆಗಳವರು ಧ್ವಜಾರೋಹಣ ಕಾರ್ಯ ಮುಗಿಸಿ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಬೇಕು. 8 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಅಲ್ಲಿರುವ ಎಲ್ಲ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ಇದರಲ್ಲಿ ಭಾಗವಹಿಸಬೇಕು. ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನೆರವೇರುವದು ಎಂದ ಅಪರ ಜಿಲ್ಲಾಧಿಕಾರಿಗಳು ಸರ್ವ ಇಲಾಖೆ, ಶಾಲಾ ಕಾಲೇಜುಗಳ ವಿದ್ಯಾಥರ್ಿ ಮತ್ತು ಶಿಕ್ಷಕ ವೃಂದವದವರು, ವಿವಿಧ ಸಂಘ ಸಂಸ್ಥಗಳವರು ತಪ್ಪದೇ ಭಾಗವಹಿಸಿ ಸಮಾರಂಭ ಯಶಸ್ವಿಗೊಳಿಸಬೇಕು ಎಂದರು.
ಜಿ.ಪಂ. ಉಪ ಕಾರ್ಯದಶರ್ಿ ಎಚ್.ಸಿ. ಮಹೇಶ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೇಶಕ ಖಾಜಾ ಹುಸೇನ ಮುಧೋಳ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿದರ್ೇಶಕ ಅಶೋಕ ಕಲಘಟಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ಅಜರ್ುನ ಗೋಳಸಂಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮುಖ್ಯಸ್ಥರುಗಳು ಸಭೆಯಲ್ಲಿ ಭಾಗವಹಿಸಿದ್ದರು.