ರಾಯಬಾಗ 14: ತಾಲೂಕಿನ ಮೇಖಳಿ, ಮಾರಡಿ ಗ್ರಾಮಗಳಲ್ಲಿ ಸರಿಯಾಗಿ ವಿದ್ಯುತ್ ಪೂರೈಕೆಯಾಗದೇ ಸಾರ್ವಜನಿಕರಿಗೆ ಮತ್ತು ರೈತರಿಗೆ ತುಂಬಾ ತೊಂದರೆ ಆಗುತ್ತಿದ್ದು, ಹೆಸ್ಕಾಂ ಅಧಿಕಾರಿಗಳು ಈ ಗ್ರಾಮಗಳಿಗೆ ಸರಿಯಾಗಿ ವಿದ್ಯುತ್ ಸರಬರಾಜು ಮಾಡಬೇಕೆಂದು ಆಗ್ರಹಿಸಿ ಕನರ್ಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಹೆಸ್ಕಾಂ ಅಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಹೆಸ್ಕಾಂದವರು ನಿಗದಿತ ಸಮಯ ಪಾಲನೆಯೊಂದಿಗೆ ವಿದ್ಯುತ್ ಸರಬರಾಜು ಮಾಡುವುದನ್ನು ಬಿಟ್ಟು, ತಮಗೆ ಇಚ್ಛೆ ಬಂದತೆ ವಿದ್ಯುತ್ ನೀಡುತ್ತಿರುವುದರಿಂದ ರೈತರು ಹಗಲು ರಾತ್ರಿ ಎನ್ನದೆ ವಿದ್ಯುತ್ಗಾಗಿ ಕಾಯುವ ಪರಿಸ್ಥಿತಿ ಬಂದಿದೆ. ಹೆಸ್ಕಾಂದವರು ಶಿಸ್ತು ಬದ್ದತೆ ಕಾಯ್ದುಕೊಳ್ಳಬೇಕಾದ ಅವಶ್ಯಕತೆ ಇದೆ. ಅಧಿಕಾರಿಗಳು ರೈತರೊಂದಿಗೆ ಸ್ಪಂದನೆ ಮಾಡದೇ ಇರುವುದರಿಂದ ಬೆಳೆಗಳು ಒಣಗಿ ರೈತರು ಸಂಕಷ್ಟ ಪಡುವಂತಾಗಿದೆ. ರೈತರ ಮನವಿಗೆ ಸ್ಪಂದಿಸದ ಅಧಿಕಾರಿಗಳಿಗೆ ತಕ್ಕ ಬುದ್ದಿವಾದ ಹೇಳಿ ತಕ್ಷಣಕ್ಕೆ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾಎ.
ಎಲ್.ಆರ.ಹೊಸಟ್ಟಿ, ತ್ಯಾಗರಾಜ ಕದಂ, ಬಾಬು ಹಿರೇಮಠ, ರವಿಂದ್ರ ಪಟ್ಟಗಾರ, ಲಕ್ಷ್ಮಣ ಹೊಸಟ್ಟಿ, ಮಲ್ಲಪ್ಪ ಅಂಗಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.