ಲೋಕದರ್ಶನ ವರದಿ
ಗಂಗಾವತಿ 05: ಸಕರ್ಾರವು ಈಗಾಗಲೇ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧಗೊಳಿಸಿದ್ದು, ಆದರೆ ಗಂಗಾವತಿ ನಗರದಾದ್ಯಂತ ಎಲ್ಲಾ ಹೋಟಲ್, ಟೀ ಅಂಗಡಿ, ಖಾಸಗಿ ಶುದ್ದ ಕುಡಿಯುವ ನೀರಿನ ಘಟಕ, ಕಿರಾಣಿ ಅಂಗಡಿ ಸೇರಿದಂತೆ ಎಲ್ಲಾ ವಲಯಗಳಲ್ಲಿಯೂ ಪ್ಲಾಸ್ಟಿಕ್ನ್ನು ಅಧಿಕವಾಗಿ ಬಳಸುತ್ತಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಡೆಂಘ್ಯೂ ಹಾಗೂ ಇತರೆ ಮಾರಕ ರೋಗಗಳು ಹರಡುತ್ತಿದ್ದು, ಅಲ್ಲದೆ ನಗರದ ಎಲ್ಲಾ ವಾಡರ್ುಗಳ ಚರಂಡಿಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳ ಸಂಗ್ರಹಣೆಯಿಂದ ದುವರ್ಾಸನೆ ಹರಡುತ್ತಿದ್ದು, ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಕೂಡಲೇ ನಗರಸಭೆಯವರು ನಗರದಾದ್ಯಾಂತ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲು ಶಿಸ್ತು ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ, ದಿ. 04ರಂದು ನಗರಸಭೆಯ ಆರೋಗ್ಯ ನಿರೀಕ್ಷಕರಾದ ಜೀವನ್ಸ್ವಾತಿ ಇವರಿಗೆ ಮನವಿ ಸಲ್ಲಿಸಲಾಯಿತು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಚನ್ನಬಸವ ಜೇಕಿನ್ರವರು ತಿಳಿಸಿದರು.
ಅವರು ಈ ಸಂದರ್ಭದಲ್ಲಿ ಮಾತನಾಡಿ, ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರುತ್ತದೆ ಎಂದು ಸಕರ್ಾರ ಈಗಾಗಲೇ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧಿಸಿರುತ್ತದೆ. ಆದರೂ ಗಂಗಾವತಿ ನಗರದಾಧ್ಯಂತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಕಡಿಮೆಯಾಗಿಲ್ಲ. ನಗರದ ಎಲ್ಲಾ ಭಾಗಗಳ ಚರಂಡಿಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆಯಾಗಿ ದುವರ್ಾಸನೆ ಹರಡುವುದಲ್ಲದೆ, ಆರೋಗ್ಯದ ಮೇಲೆ ತುಂಬಾ ಕೆಟ್ಟ ಪರಿಣಾಮ ಬಿರುತ್ತಿದೆ. ಕೂಡಲೇ ನಗರಸಭೆ ಎಚ್ಚೆತ್ತುಕೊಂಡು ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸ್ಥಗಿತಗೊಳಿಸಲು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ನಮ್ಮ ಸಂಘಟನೆಯಿಂದ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ನಗರಸಭೆಗೆ ಎಚ್ಚರಿಸಿದರು.
ಜಿಲ್ಲಾ ಉಪಾಧ್ಯಕ್ಷರಾದ ಆದಿಲ್ಪಾಷಾ, ಜಿಲ್ಲಾ ಎಸ್.ಸಿ/ಎಸ್.ಟಿ ಘಟಕದ ಅಧ್ಯಕ್ಷರಾದ ಶಿವಪ್ಪ ವಿನೋಬನಗರ, ಗಂಗಾವತಿ ತಾಲೂಕ ಅಧ್ಯಕ್ಷರಾದ ಮಂಜುನಾಥ ಪತ್ತಾರ್, ಪದಾಧಿಕಾರಿಗಳಾದ ಸಂಗನಗೌಡ ಪಾಟೀಲ್, ಲಕ್ಷ್ಮಣ ಭಾವಿಕಟ್ಟಿ, ಈ. ನಾಗರಾಜ, ಶ್ರೀಧರ, ಖಾದರವಲಿ, ರಮೇಶ, ದೇವರಾಜ ನಾಯಕ, ಭೀಮನಗೌಡ ಮತ್ತಿತರರು ಉಪಸ್ಥಿತರಿದ್ದರು.