ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್ ರವರಿಗೆ ವೈದ್ಯಕೀಯ ಕಾಲೇಜು ಮಂಜೂರಿಗಾಗಿ ಮನವಿ

ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್ ರವರಿಗೆ ವೈದ್ಯಕೀಯ ಕಾಲೇಜು ಮಂಜೂರಿಗಾಗಿ ಮನವಿ Request to Medical Education Secretary Mohammad Moshin for sanction of medical college

            ವಿಜಯಪುರ 20: ಇಂದು ವೈದ್ಯಕೀಯ ಶಿಕ್ಷಣ ರಾಜ್ಯ ಕಾರ್ಯದರ್ಶಿಯಾದ ಮೊಹಮ್ಮದ್ ಮೋಶಿನ್ ರವರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಹೋರಾಟ ಸಮಿತಿ ಸದಸ್ಯರಾದ ಅರವಿಂದ್ ಕುಲಕರ್ಣಿ ಅವರು ವಿಜಯಪುರ ಜಿಲ್ಲೆಗೆ ಸರ್ಕಾರ ದ್ರೋಹ ಬಗೆಯುತ್ತಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. 153 ಎಕರೆ ಜಾಗವಿದ್ದರೂ ಸಹ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಲು ಹಿಂದೇಟು ಹಾಕುತ್ತಿದೆ. ನಮ್ಮ ಜಿಲ್ಲೆ ಅತಿ ಹಿಂದುಳಿದ ಜಿಲ್ಲೆ. ಹಾಗೂ ಬಡ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಅವಶ್ಯಕತೆ ಇದೆ ಅದಕ್ಕಾಗಿ ಬಿಜಾಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕು.

         ಯಾವುದೇ ಕಾರಣಕ್ಕೂ ಖಾಸಗಿ ಅವರಿಗೆ ಒಪ್ಪಿಸಬಾರದೆಂದು ಮಾನ್ಯ ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿಗಳಿಗೆ ಮನವಿ ಮಾಡಿಕೊಂಡರು. ಮನವಿ ಸ್ವೀಕರಿಸಿದ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾದ ಮೊಹಮ್ಮದ್ ಮೋಶಿನ್ ರವರು ಮಾತನಾಡುತ್ತ ನಾವು ನಿಮ್ಮ ಅಹವಾಲನ್ನು ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಮಾತನಾಡುತ್ತೇವೆ ಎಂದು ಭರವಸೆ ನೀಡಿದರು. ನಿಯೋಗದಲ್ಲಿ ಹೋರಾಟ ಸಮಿತಿಯ ಸದಸ್ಯರುಗಳಾದ ಅಕ್ರಮ ಮಾಷಾಳಕರ್,ಸುರೇಶ್ ಬಿಜಾಪುರ್, ಭರತ್ ಕುಮಾರ್, ಎಚ್ ಟಿ,ಮಲ್ಲಿಕಾರ್ಜುನ ಹೆಚ್ ಟಿ, ಮುನ್ನಾ ಭಕ್ಷಿ, ಲಕ್ಷ್ಮಣ ಕಂಬಾಗಿ, ಇಸ್ಮಾಯಿಲ್ ಉಕ್ಕಲಿ, ಸಿದ್ರಾಮ ಹಿರೇಮಠ ಇದ್ದರು.