ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ
Request to the District Collector to sanction a multi-specialty hospital
ಹಾವೇರಿ 28 : ಜಿಲ್ಲೆಯ ಸವಣೂರ ತಾಲ್ಲೂಕಿನ ಹಿರೇಮುಗದೂರ ಗ್ರಾಮದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯಿಸಿ ಭಾರತ ಸರ್ಕಾರದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಹಿರೇಮುಗದೂರ ಗ್ರಾಮ ಪಂಚಾಯತಿ ಸದಸ್ಯರಾದ ನಿಂಗಪ್ಪ ಎಂ ಆರೇರ ಅವರು ಜಿಲ್ಲಾಡಳಿತ ಭವನದಲ್ಲಿ ಹಾವೇರಿ ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ದಾನಮ್ಮನವರ ಅವರ ಮೂಲಕ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯದ ಹಾವೇರಿ ಜಿಲ್ಲೆಯ ಸವಣೂರ ತಾಲ್ಲೂಕಿನ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹಿರೇಮುಗದೂರ ಗ್ರಾಮದಲ್ಲಿ ಆಯುಷ್ಮಾನ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಆಯುಷ್ಮಾನ್ ಆರೋಗ್ಯ ಮಂದಿರ ಸೇವೆ ಸಲ್ಲಿಸುತ್ತಿದ್ದು, ಹಿರೇಮುಗದೂರ ಗ್ರಾಮ ಸುಮಾರು 10-12 ಗ್ರಾಮಗಳ ಮಧ್ಯ ಭಾಗದಲ್ಲಿ ಇದ್ದು,
ಈ ಭಾಗದ ಜನರಿಗೆ ಹತ್ತಿರದಲ್ಲಿ ಎಲ್ಲಾ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ಎಲ್ಲರಿಗೂ ಅನುಕೂಲವಾಗುವಂತೆ ಕೇಂದ್ರ ಸರ್ಕಾರದಿಂದ, ವಿಶೇಷ ಅನುದಾನದಿಂದ ಅಥವಾ ಪ್ರಧಾನಮಂತ್ರಿಗಳ ವಿಶೇಷ ಅನುದಾನದಿಂದ ಹಿರೇಮುಗದೂರ ಗ್ರಾಮದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಿ,ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಆಸ್ಪತ್ರೆ ಪ್ರಾರಂಭ ಮಾಡುವಂತೆ ಆಗಬೇಕು.ಈ ಬೇಡಿಕೆ ಈಡೇರಿಕೆ ಮಾಡಲು ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ತಾವುಗಳು ವಿಶೇಷ ಕಾಳಜಿವಹಿಸಿ ಹಿರೇಮುಗದೂರ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಹತ್ತಿರದಲ್ಲಿ ಎಲ್ಲಾ ಆರೋಗ್ಯ ಸೇವೆಗೆ ಅನುಕೂಲ ಮಾಡಿಕೊಡಬೇಕೆಂದು ಹಾಗೂ ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ನಮ್ಮ ಈ ಬೇಡಿಕೆಗಳನ್ನು ಈಡೇರಿಸಬೇಕೆಂದು ಗ್ರಾಪಂ ಸದಸ್ಯರಾದ ನಿಂಗಪ್ಪ ಎಂ ಆರೇರ ಅವರು ಮನವಿ ಪತ್ರದಲ್ಲಿ ಮನವಿ ಮೂಲಕ ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 