ದಲಿತರ ಕುಂದು ಕೊರತೆ ಸಭೆ ನಡೆಸಲು ತಹಶೀಲ್ದಾರ್ ಗೆ ಮನವಿ
Request to the Tahsildar to hold a meeting on the grievances of Dalits
ತಾಳಿಕೋಟಿ 06 : ತಾಲೂಕಿನ ವಿವಿಧ ಗ್ರಾಮಗಳಲ್ಲಿರುವ ದಲಿತ ಸಮುದಾಯದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ ಹಾಗೂ ತಾಳಿಕೋಟಿ ಅಂಬೇಡ್ಕರ್ ಸೇನೆ ಕಾರ್ಮಿಕ ಘಟಕದ ಅಧ್ಯಕ್ಷ ಪರಶುರಾಮ ನಾಲತವಾಡ ಅವರು ತಹಶೀಲ್ದಾರ್ ಡಾ.ವಿನಯಾ ಹೂಗಾರ ಅವರಿಗೆ ಮನವಿ ಸಲ್ಲಿಸಿದರು. ಮನವಿ ಪತ್ರದಲ್ಲಿ ತಾಳಿಕೋಟಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ದಲಿತ ಸಮುದಾಯ ಜನರ ಸ್ಮಶಾನ ಸಮಸ್ಯೆ, ಅಸ್ಪೃಶ್ಯತೆ ಆಚರಣೆ ಹಾಗೂ ದಲಿತ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳು ಇದ್ದು ಇವುಗಳನ್ನು ಪರಿಹರಿಸುವ ಅಗತ್ಯವಿದೆ ಈ ಕಾರಣಕ್ಕಾಗಿ ತಾಲೂಕ ಆಡಳಿತ ಆದಷ್ಟು ಬೇಗ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಬೇಕೆಂದು ಕೋರಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 