ಸೌರ ಕೃಷಿ ಯೋಜನೆಗೆ ಭದ್ದತೆ : ಖಾದ್ರಿ
Responsibility for solar farming project: Qadri
ಶಿಗ್ಗಾವಿ 07 : ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸೌರ ಕೃಷಿ ಯೋಜನೆ ಎಂಬ ಹೊಸ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್ಗಳಿಗೆ ಹಗಲು ವೇಳೆ 7 ತಾಸು ವಿದ್ಯುತ್ ಪೂರೈಸುವ ಬದ್ಧತೆಯನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ಹೆಸ್ಕಾಂ ಅಧ್ಯಕ್ಷರಾದ ಸೈಯದ್ ಅಜೀಮ್ಪೀರ್ ಎಸ್ ಖಾದ್ರಿ ಅವರು ಹೇಳಿದ್ದಾರೆ. 2026-27ನೇ ಸಾಲಿನಲ್ಲಿ 100 ಹೊಸ ಉಪ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಘೋಷಿಸುವ ಮೂಲಕ ಎಲ್ಲರಿಗೂ ಸಮರ್ಕ ವಿದ್ಯುತ್ ಪೂರೈಕೆಯನ್ನು ಸಾಕಾರಗೊಳಿಸಲು ದೃಢ ಹೆಜ್ಜೆ ಇಟ್ಟಿದ್ದಾರೆ. ಅದೇ ರೀತಿ ಬೇಡಿಕೆ ಅವಧಿಯಲ್ಲಿ ವಿದ್ಯುತ್ ಪೂರೈಸಲು ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದನೆಯಾದ ವಿದ್ಯುತ್ತನ್ನು ಸಂಗ್ರಹಿಸಲು ಅನುಕೂಲವಾಗುವಂತೆ 2,000 ಮೆಗಾವ್ಯಾಟ್ ಪರ್ ಅವರ್ ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆ ಯೋಜನೆಗೆ ಅಂದಾಜು 3,400 ಕೋಟಿ ರೂ. ಹೂಡಿಕೆಗೆ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 