ಭಾರತ ಸೇವಾ ಸಂಸ್ಥೆವತಿಯಿಂದ ಕೆರೆಗಳ ಪುನಶ್ಚೇತನ ಕಾಮಗಾರಿ
Restoration work of lakes by Bharat Seva Sansthanavati
ಶಿಗ್ಗಾವಿ 09 : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸ್ವಚ್ಚ ಭಾರತ್ ಅಭಿಯಾನ ಕಾರ್ಯಕ್ರಮವನ್ನು ಪ್ರೇರಣೆಯಾಗಿ ಇಟ್ಟುಕೊಂಡು ರೈತರ ಜೀವನಾಡಿಯಂತಿರುವ ಕೆರೆಗಳ ಪುನಶ್ಚೇತನ ಕಾಮಗಾರಿಯನ್ನು ಭಾರತ ಸೇವಾ ಸಂಸ್ಥೆಯ ಮೂಲಕ ಉಚಿತವಾಗಿ ಕೆರೆಗಳ ಹೂಳೆತ್ತುವ ಕೆಲಸ ಮಾಡುವುದಾಗಿ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಪಟ್ಟಣದಲ್ಲಿರುವ ಭಾರತ ಸೇವಾ ಸಂಸ್ಥೆ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಜನೆವರಿ ಕೊನೆಯ ವಾರದಿಂದ ಕೆರೆಗಳ ಹೂಳೆತ್ತುವ ಕೆಲಸ ಪ್ರಾರಂಭಿಸಲಾಗುವುದು.
ಸತತ ಮೂರು ತಿಂಗಳು ತಾಲೂಕಿನಲ್ಲಿರುವ ಪ್ರಮುಖ ಕೆರೆಗಳನ್ನು ಹೂಳೆತ್ತುವ ಮೂಲಕ ಅಂತರ್ಜಲ ಮಟ್ಟ ಸುಧಾರಣೆ, ಕೆರೆಗಳ ನೀರಿನ ಸಂಗ್ರಹ ಮಟ್ಟವನ್ನು ಹೆಚ್ಚಿಸುವ ಹಾಗೂ ರೈತರ, ಜನಸಾಮಾನ್ಯರ ಅನುಕೂಲದ ದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಭಾರತ ಸೇವಾ ಸಂಸ್ಥೆಯಿಂದ ಉಚಿತವಾಗಿ ಹೂಳೆತ್ತುವ ಕೆಲಸವನ್ನು ಮಾಡಲಾಗುತ್ತದೆ ಎಂದರು.ಈಗಿನ ಕಾಲದಲ್ಲಿ ಹೊಸ ಕೆರೆಗಳ ನಿರ್ಮಾಣ ಕಷ್ಟವಾಗಿರುವುದರಿಂದ, ಪೂರ್ವಜರ ಕಾಲದಲ್ಲಿ ನಿರ್ಮಾಣಗೊಂಡ ಕೆರೆಗಳನ್ನು ಪುನಶ್ಚೇತನಗೊಳಿಸುವುದೆ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.
ಶಿಗ್ಗಾವಿ ತಾಲೂಕಿನ ನಾಲ್ಕು ಜಿಲ್ಲಾ ಪಂಚಾಯಿತಿ ಹಾಗೂ ಸವಣೂರ ತಾಲೂಕಿನ ಎರಡು ಜಿಲ್ಲಾ ಪಂಚಾಯಿತಿಯ ಪ್ರಮುಖ ಕೆರೆಗಳನ್ನು ಆಯ್ಕೆ ಮಾಡಿಕೊಂಡು ಸಂಸ್ಥೆಯಿಂದ ಉಚಿತವಾಗಿ ಹೂಳೆತ್ತುವ ಕೆಲಸವನ್ನು ಮಾಡಲಾಗುವುದು. ಈ ಭಾಗದ ಮಠಾಧೀಶರು, ಮಾಜಿ ಮುಖ್ಯಮಂತ್ರಿ, ಸಂಸದರು, ಕೇಂದ್ರ ಸಚಿವರು, ಶಾಸಕರು ಸೇರಿದಂತೆ ವಿವಿಧ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.
2016ರಲ್ಲಿ ಭೀಕರ ಬರಗಾಲದ ಸಮಯದಲ್ಲಿ ಭಾರತ ಸೇವಾ ಸಂಸ್ಥೆ ಕೆರೆಗಳ ಹೂಳೆತ್ತುವ ಕೆಲಸವನ್ನು ಪ್ರಾರಂಭ ಮಾಡಿ, ತಾಲೂಕಿನ ಗ್ರಾಮೀಣ ಪ್ರದೇಶದ ಜನರಿಗೆ ಟ್ಯಾಂಕರ್ ಮೂಲಕ ಮನೆ ಮನೆಗೆ ಕುಡಿಯುವ ನೀರು ಸರಬರಾಜು ಮಾಡುವ ಮೂಲಕ, ಸಮಾಜ ಸೇವೆಯನ್ನು ಪ್ರಾರಂಭಿಸಿದೆ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಉಚಿತ ಸಾಮೂಹಿಕ ಮದುವೆ ಸೇರಿದಂತೆ ರೈತರ, ಬಡವರ ಶ್ರೇಯೋಭಿವೃದ್ಧಿಗಾಗಿ ಹಲವಾರು ಜನಸೇವೆಯ ಕಾರ್ಯಕ್ರಮಗಳನ್ನು ಭಾರತ ಸೇವಾ ಸಂಸ್ಥೆಯಿಂದ ನಿರಂತರವಾಗಿ ಮಾಡಲಾಗುತ್ತದೆ ಎಂದರು.ಕೆರೆಯ ಕಾಮಗಾರಿಯಿಂದ ಬರುವ ಫಲವತ್ತಾದ ಮಣ್ಣನ್ನು ರೈತರು ತಮ್ಮ ಹೊಲಗಳಿಗೆ ಬಳಸುವುದರ ಮೂಲಕ ತಮ್ಮ ಕೃಷಿಭೂಮಿಯನ್ನು ಹೆಚ್ಚು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 