ಹಂದಿಗುಂದದಲ್ಲಿ ಮುಖ್ಯೋಪಾಧ್ಯಾಯ ಜಿ.ಕೆ. ಗಾಯಕ್ವಾಡ್ ನಿವೃತ್ತಿ ಸಮಾರಂಭ ಜು.12ರಂದು
Retirement ceremony of Headmaster G.K. Gaikwad at Handigunda on July 12
ಪಾಲಬಾವಿ, ಜು.10: ರಾಯಬಾಗ ತಾಲೂಕು ಹಂದಿಗುಂದ ಗ್ರಾಮದ ಶ್ರೀ ಸಿದ್ದೇಶ್ವರ ವಿದ್ಯಾವರ್ಧಕ ಸಂಘದ ಕನ್ನಡ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಆದರ್ಶ ಶಿಕ್ಷಕರಾದ ಜಿ.ಕೆ. ಗಾಯಕ್ವಾಡ್ ಅವರ ನಿವೃತ್ತಿ ಅಂಗವಾಗಿ ಜುಲೈ 12ರಂದು ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಕನ್ನಡ ಪ್ರೌಢಶಾಲೆಯಿಂದ ಶ್ರೀ ಸಿದ್ದೇಶ್ವರ ಸಾಂಸ್ಕೃತಿಕ ಭವನದವರೆಗೆ ಗಾಯಕ್ವಾಡ್ ಅವರನ್ನು ಬೆಳ್ಳಿಯ ರಥದ ಮಾದರಿಯ ಅಲಂಕೃತ ವಾಹನದಲ್ಲಿ ಮೆರವಣಿಗೆಯ ಮೂಲಕ ಕರೆತರಲಾಗುತ್ತದೆ. ನಂತರ ಬೆಳಿಗ್ಗೆ 11 ಗಂಟೆಗೆ ಸಾಂಸ್ಕೃತಿಕ ಭವನದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ.
ಕಾರ್ಯಕ್ರಮಕ್ಕೆ ಶ್ರೀ ಸಿದ್ದೇಶ್ವರ ಮಠದ ಪೀಠಾಧಿಪತಿ ಶಿವಾನಂದ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಚಿಮ್ಮಡ ವಿರಕ್ತಮಠದ ಪ್ರಭು ಮಹಾಸ್ವಾಮೀಜಿ ಹಾಗೂ ಗುರುಲಿಂಗಯ್ಯ ಹಿರೇಮಠ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.
ಜೆಎಸ್‌ಎಸ್ಕೆ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ವಿಜಯಕುಮಾರ ಮಠ ಹಾಗೂ ಮಹಾಲಿಂಗಪುರ ಕೆಎಲ್‌ಇ ವಿದ್ಯಾಸಂಸ್ಥೆಯ ಉಪನ್ಯಾಸಕ ಶಿವಲಿಂಗ ಸಿದ್ನಾಳ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
1990ರ ಜುಲೈ 11ರಿಂದ 2026ರ ಜೂನ್ 30ರವರೆಗೆ ನಿರಂತರ 33 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಜಿ.ಕೆ. ಗಾಯಕ್ವಾಡ್ ಅವರಿಗೆ ಹಳೆಯ ಹಾಗೂ ಹಾಲಿ ವಿದ್ಯಾರ್ಥಿಗಳು ಗೌರವ ಸಮರ್ಿಸಿ ಅಭಿನಂದಿಸಲಿದ್ದಾರೆ. ಸಮಾರಂಭದ ಬಳಿಕ ಸಿದ್ದೇಶ್ವರ ತಾಸೋಡ ನಿವಾಸದಲ್ಲಿ ಅನ್ನಸಂತರೆ್ಣ ಏರಿ್ಡಸಲಾಗಿದೆ ಎಂದು ಹಿರಿಯ ಶಿಕ್ಷಕರಾದ ಬಿ.ಎಸ್. ಕರಾಳೆ ಹಾಗೂ ಟಿ.ಜಿ. ದಾಸಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 