ಕಂದಾಯ ಇಲಾಖೆ ಸಂಪರ್ಣ ಡಿಜಿಟಲೀಕರಣಕ್ಕೆ ಬದ್ಧ : ಸಚಿವ ಕೃಷ್ಣ ಭೈರೇಗೌಡಮಧ್ಯರ್ತಿಗಳ ಹಾವಳಿಗೆ ಕಡಿವಾಣ ಹಾವೇರಿಯಲ್ಲಿ 1.10 ಲಕ್ಷ ಹಕ್ಕುಪತ್ರ ವಿತರಣೆ

ಕಂದಾಯ ಇಲಾಖೆ ಸಂಪರ್ಣ ಡಿಜಿಟಲೀಕರಣಕ್ಕೆ ಬದ್ಧ : ಸಚಿವ ಕೃಷ್ಣ ಭೈರೇಗೌಡಮಧ್ಯರ್ತಿಗಳ ಹಾವಳಿಗೆ ಕಡಿವಾಣ ಹಾವೇರಿಯಲ್ಲಿ 1.10 ಲಕ್ಷ ಹಕ್ಕುಪತ್ರ ವಿತರಣೆ Revenue Department committed to digitalization of connectivity: Minister Krishna Bhairegowda, 1.10

       ಗದಗ 09 : ಕಂದಾಯ ಇಲಾಖೆಯನ್ನು ಸಂಪರ್ಣ ಡಿಜಿಟಲೀಕರಣಗೊಳಿಸಿ ಸರ್ವಜನಿಕರಿಗೆ ಪಾರರ್ಶಕ ಸೇವೆ ಒದಗಿಸುವುದು ರ್ಕಾರದ ಗುರಿಯಾಗಿದ್ದು, ಇದರಿಂದ ಮಧ್ಯರ್ತಿಗಳ ಹಾವಳಿಗೆ ಕಡಿವಾಣ ಬೀಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ರ್ಕಾರ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ತಹಶೀಲ್ದಾರ್ ಕಚೇರಿಗಳಲ್ಲಿ 10,774 ಅವಧಿ ಮೀರಿದ ಪ್ರಕರಣಗಳಿದ್ದವು. ವಿಶೇಷ ಅಭಿಯಾನ ಹಮ್ಮಿಕೊಂಡು ಅವುಗಳನ್ನು ವಿಲೇವಾರಿ ಮಾಡಲಾಗಿದ್ದು, ಸದ್ಯ 478 ಪ್ರಕರಣ ಮಾತ್ರ ಬಾಕಿ ಉಳಿದಿವೆ. ಅವುಗಳನ್ನೂ ಶೀಘ್ರ ಇತ್ರ್ಥಗೊಳಿಸಲು ಸೂಚನೆ ನೀಡಲಾಗಿದೆ ಎಂದರು.ಎ.ಸಿ ನ್ಯಾಯಾಲಯಗಳಲ್ಲಿ 73,624 ಅವಧಿ ಮೀರಿದ ಪ್ರಕರಣಗಳಿದ್ದರೆ, ಈಗ ಅವು 11,605 ಕ್ಕೆ ಇಳಿದಿವೆ.

        ಐದು ರ್ಷಕ್ಕಿಂತ ಹೆಚ್ಚು ಕಾಲ ಬಾಕಿ ಇದ್ದ 32,782 ಪ್ರಕರಣಗಳಲ್ಲಿ ಕೇವಲ 3,155 ಮಾತ್ರ ಉಳಿದಿದ್ದು, ಮುಂದಿನ ಎರಡು ತಿಂಗಳಲ್ಲಿ ಇವುಗಳನ್ನು ಇತ್ರ್ಥಗೊಳಿಸುವಂತೆ ಅಧಿಕಾರಿಗಳಿಗೆ ನರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.ಬಗರ್ ಹುಕುಂ ರೈತರ ಜಮೀನುಗಳ ರ್ವೆ ಮತ್ತು ಆರಿ​‍್ಟ.ಸಿ ಸಮಸ್ಯೆ ನಿವಾರಣೆಗೆ “ನನ್ನ ಭೂಮಿ ಅಭಿಯಾನ” ಆರಂಭಿಸಲಾಗಿದೆ. 2013-18 ಅವಧಿಯಲ್ಲಿ 5,842 ಪೋಡಿ ದುರಸ್ತಿ ಆಗಿದ್ದರೆ, 2018-23ರಲ್ಲಿ 8,500 ಪ್ರಕರಣಗಳು ವಿಲೇವಾರಿಯಾಗಿವೆ. ಜನವರಿ 2025ರಿಂದ ಆರಂಭವಾದ ಅಭಿಯಾನದಡಿ ಸದ್ಯ ರಾಜ್ಯಾದ್ಯಂತ 1,93,615 ಪ್ರಕರಣಗಳಲ್ಲಿ ರ್ವೆ ಮತ್ತು ಪೋಡಿ ದುರಸ್ತಿ ನಡೆಯುತ್ತಿದೆ.

         ಅಧಿಕಾರಿಗಳು ಮನೆಬಾಗಿಲಿಗೆ ತೆರಳಿ ಸೇವೆ ನೀಡುತ್ತಿರುವುದು ರ್ಕಾರದ ಬದ್ಧತೆಯ ಕರ್ಯ ಎಂದರು.ತಾಂಡಾ ಹಾಗೂ ಹಟ್ಟಿಗಳ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿರ್ತಿಸುವ ಕ್ರಮದಡಿ ಹಿಂದಿನ ಆರು ರ್ಷಗಳಲ್ಲಿ ಒಂದು ಲಕ್ಷ ಹಕ್ಕುಪತ್ರ ವಿತರಿಸಲಾಗಿತ್ತು. ನಮ್ಮ ರ್ಕಾರದ ಎರಡೂವರೆ ರ್ಷದ ಅವಧಿಯಲ್ಲಿ 1.10 ಲಕ್ಷ ಜನರಿಗೆ ಹಕ್ಕುಪತ್ರ ನೀಡಲಾಗಿದೆ. ಫೆ. 14 ರಂದು ಹಾವೇರಿಯಲ್ಲಿ ಸಮಾವೇಶ ನಡೆಸಿ ಇದೇ ಸಂಖ್ಯೆಯ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ಹೇಳಿದರು.

         ರಾಜ್ಯದಲ್ಲಿ ಮೃತರ ಹೆಸರಿನಲ್ಲಿ ಉಳಿದಿದ್ದ 49 ಲಕ್ಷ ಜಮೀನುಗಳನ್ನು ಗುರುತಿಸಿ ವಾರಸುದಾರರಿಗೆ ಹಸ್ತಾಂತರಿಸುವ ಕರ್ಯ ನಡೆಯುತ್ತಿದೆ. ಈಗಾಗಲೇ 12 ಲಕ್ಷ ಮೂಲ ವಾರಸುದಾರರಿಗೆ ಜಮೀನು ಹಸ್ತಾಂತರಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಇಂತಹ 50 ಸಾವಿರ ಪ್ರಕರಣಗಳಿದ್ದು, ಸದ್ಯ 12 ಸಾವಿರ ಮಾತ್ರ ಬಾಕಿ ಉಳಿದಿವೆ. ಗ್ರಾಮ ಲೆಕ್ಕಾಧಿಕಾರಿಗಳು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದು, ಅವರಿಗೆ ಪ್ರೋತ್ಸಾಹಧನವಾಗಿ 5 ಕೋಟಿ ರೂ. ನೀಡಲು ರ್ಕಾರ ತರ್ಮಾನಿಸಿದೆ ಎಂದರು.ಹಳೆ ದಾಖಲೆಗಳ ನಕಲಿ ತಡೆಗಟ್ಟಲು “ಭೂಸುರಕ್ಷಾ” ಯೋಜನೆಯಡಿ 64 ಲಕ್ಷಕ್ಕೂ ಹೆಚ್ಚು ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. ಸರ್ವಜನಿಕರು ಆನ್ಲೈನ್ನಲ್ಲೇ ಕಂದಾಯ ದಾಖಲೆಗಳನ್ನು ಪಡೆಯುವ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ಮಧ್ಯರ್ತಿಗಳ ಹಾವಳಿ ತಪ್ಪಲಿದೆ.

         ಭೂಮಿಯ ಮಾಲಿಕತ್ವಕ್ಕೆ ಗ್ಯಾರಂಟಿ ನೀಡುವ ಉದ್ದೇಶದಿಂದ ಯೋಜನೆ ಜಾರಿಗೆ ತರಲಾಗಿದೆ.  ಗ್ರಾಮ ಲೆಕ್ಕಾಧಿಕಾರಿಗಳಿಗೆ 5 ಸಾವಿರ ಲ್ಯಾಪ್ಟಾಪ್ಗಳನ್ನು ವಿತರಿಸಿದ್ದು, ಅತ್ಯಾಧುನಿಕ ರ್ವೆ ಉಪಕರಣಗಳನ್ನು ಕೂಡ ಒದಗಿಸಲಾಗಿದೆ ಎಂದು ಸಚಿವರ ಕೃಷ್ಣ ಬೈರೇಗೌಡ ವಿವರಿಸಿದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲ್ಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಉಪಸ್ಥಿತರಿದ್ದರು.