ಫೆ.13 ರಂದು ಹಾವೇರಿಯಲ್ಲಿ ಕಂದಾಯ ಇಲಾಖೆ ಹಕ್ಕುಪತ್ರ ವಿತರಣಾ ಸಮಾವೇಶ -ಕಂದಾಯ ಸಚಿವ ಕೃಷ್ಣ ಬೈರೇಗೌಡ
Revenue Department title deed distribution conference in Haveri on Feb. 13 - Revenue Minister Krish
ಹಾವೇರಿ 20: ಕಂದಾಯ ಇಲಾಖೆ ಹಕ್ಕುಪತ್ರ ವಿತರಣಾ ಸಮಾವೇಶ ಫೆ.13 ರಂದು ಹಾವೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಹಾಡಿ, ಹಟ್ಟಿ, ತಾಂಡಾ ಹೀಗೆ ಬೇರೆ ಬೇರೆ ಹೆಸರಿನಿಂದ ಮೂರಾ್ನಲ್ಕು ತಲೆಮಾರುಗಳಿಂದ ದಾಖಲೆ ರಹಿತವಾಗಿ ವಾಸಿಸುವವರಿಗೆ ಅತಂತ್ರ ಬದುಕಿನಿಂದ ಮುಕ್ತಿ ನೀಡಿ, ನೆಮ್ಮದಿ ಬದುಕು ನಡೆಸಲು ರಾಜ್ಯದ 1 ಲಕ್ಷ ಜನರಿಗೆ ಹಕ್ಕುಪತ್ರ ನೀಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಕಂದಾಯ ಇಲಾಖೆ ಹಕ್ಕುಪತ್ರ ವಿತರಣಾ ಸಮಾವೇಶದ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಫೆ.13 ರಂದು ನಮ್ಮ ಸರ್ಕಾರ 1000 ದಿನಗಳನ್ನು ಪೂರೈಸಲಿದೆ. ಈ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುವುದು ಸರ್ಕಾರದ ಆಶಯವಾಗಿದೆ. ಜನಗಳ ಸರ್ಕಾರ ಜನರ ಸ್ವತ್ತು. ಹಾಗಾಗಿ ಜನರಿಗೆ ಸಮರೆ್ಣ ಮಾಡುವ ವಿಚಾರ ಬಂದಾಗ ಹಾವೇರಿಯನ್ನು ಆಯ್ಕೆ ಮಾಡಲಾಗಿದೆ ಎಂದರು.
ದಾಖಲೆ ರಹಿತರಿಗೆ ಕಂದಾಯ ಗ್ರಾಮ ಮಾಡುವುದು ಬಹಳ ದಿನಗಳ ಹೋರಾಟವಾಗಿದೆ. ನಮ್ಮ ಸರ್ಕಾರದ ಎರಡು ವರ್ಷದ ಅವಧಿಯಲ್ಲಿ ಈಗಾಗಲೇ 2023 ರಲ್ಲಿ 1.11 ಲಕ್ಷ ಹಕ್ಕು ಪತ್ರ ನೀಡಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಈವರೆಗೆ 28 ಸಾವಿರ ಜನರಿಗೆ ಹಕ್ಕುಪತ್ರ ನೀಡಲಾಗಿದೆ. ಇಂದು ಇಷ್ಟು ದೊಡ್ಡಮಟ್ಟದಲ್ಲಿ ಹಕ್ಕುಪತ್ರಗಳ ತಯಾರಿಗೆ ಸ್ಥಳೀಯ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಗಳ ಶ್ರಮವಿದೆ. ನಿಮ್ಮ ಕೆಲಸದ ಸಾರ್ಥಕತೆಯಾಗಲು ಹಕ್ಕು ಪತ್ರ ವಿತರಣೆ ಸಮಾವೇಶ ಹಾವೇರಿಯಲ್ಲಿ ಮಾಡುವ ಕುರಿತು ಸ್ಥಳಿಯ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಮಾತನಾಡಿ, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದಾಗ ಅವರು ಸಹ ಹಾವೇರಿಯಲ್ಲಿ ಮಾಡಲು ಒಪ್ಪಿಕೊಂಡಿದ್ದಾರೆ. ಈ ಸಮಾವೇಶದ ಯಶಸ್ವಿಗೆ ಎಲ್ಲರೂ ಕೈಜೋಡಿಸಿ ಕೆಲಸಮಾಡಬೇಕು ಎಂದರು.
ಜಿಲ್ಲೆಯುಲ್ಲಿ ಆರ್‌ಟಿಸಿ, ತಿದ್ದುಪಡಿ, ದರಖಾಸ್ತ ಕೆಲಸ, ಪೋತಿ ಖಾತೆ ಸೇರಿದಂತೆ ವಿವಿಧ ಕೆಲಸಗಳು ಅತ್ಯಂತ ಉತ್ತಮವಾಗಿ ಆಗಿವೆ. ಈ ಮೊದಲು ಹದ್ದುಬಸ್ತಿಗೆ 6 ರಿಂದ 12 ತಿಂಗಳು ಅಗುತ್ತಿತ್ತು, ಈಗ ಒಂದು ತಿಂಗಳಲ್ಲಿ ಆಗುತ್ತಿದೆ. ಎಲ್ಲರೂ ಸೇರಿ ಬದಲಾವಣೆ ತಂದಿದ್ದೀರಿ. ಆಗಿರುವ ಕೆಲಸ ಜನರಿಗೆ ಕಾಣಬೇಕು. ಕೆಲಸ ಮಾಡಿದವರನ್ನು ಗುರುತಿಸುವ ಕೆಲಸವಾಗಬೇಕು ಹಾಗೂ ಕೆಲಸ ಮಾಡಲು ಪ್ರೋತ್ಸಾಹ ಸಿಗುವಂತಾಗಬೇಕು. ಅದು ಇಂತಹ ಕಾರ್ಯಕ್ರಮಗಳಿಂದ ಸಾಧ್ಯ ಎಂದರು.
ಹಕ್ಕುಪತ್ರ ವಿತರಣೆ ಸಮಾವೇಶಕ್ಕೆ ಫಲಾನುಭವಿಗಳ ಪಟ್ಟಿಯನ್ನು ಎಕ್ಸಲ್ ಸೀಟ್‌ನಲ್ಲಿ ತಯಾರಿಸಿಕೊಳ್ಳಬೇಕು. ಅವರೊಂದಿಗೆ ಸಮನ್ವಯ ಸಾಧಿಸಿ ಮಾಹಿತಿ ಪಡೆದುಕೊಳ್ಳಬೇಕು, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಹಾಗೂ ಜವಾಬ್ದಾರಿಯಿಂದ ಕೆಲಸಮಾಡುವ ಮೂಲಕ ಸಮಾವೇಶ ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ವೇದಿಕೆ ನಿರ್ಮಾಣ ಸ್ಥಳ, ವಿಐಪಿ ವಾಹನಗಳ ಸಂಚಾರ, ಫಲಾನುಭವಿಗಳ ನಾಲ್ಕು ಚಕ್ರ ಹಾಗೂ ದ್ವಿಚಕ್ರ ವಾಹನಗಳ ನಿಲುಗಡೆ ಹೆಲಿಪ್ಯಾಡ್ ವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಶಾಸಕರಾದ ಯು.ಬಿ.ಬಣಕಾರ, ಶ್ರೀನಿವಾಸ ಮಾನೆ, ಯಾಸೀರ ಅಹ್ಮದಖಾನ ಪಠಾಣ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 