ಮುಖ್ಯಮಂತ್ರಿಗಳ ಪರಿಷ್ಕೃತ ಕೊಪ್ಪಳ ಜಿಲ್ಲಾ ಪ್ರವಾಸ
Revised Koppal District Tour of the Chief Minister
ಮುಖ್ಯಮಂತ್ರಿಗಳ ಪರಿಷ್ಕೃತ ಕೊಪ್ಪಳ ಜಿಲ್ಲಾ ಪ್ರವಾಸ
ಕೊಪ್ಪಳ 05 : ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅಕ್ಟೋಬರ್ 6ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 10.30 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 11.40ಕ್ಕೆ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರೀಪ್ (ಎಂ.ಎಸ್.ಪಿ.ಎಲ್)ಗೆ ಆಗಮಿಸುವರು. ಅಲ್ಲಿಂದ 11.50ಕ್ಕೆ ನಿರ್ಗಮಿಸಿ ರಸ್ತೆಯ ಮೂಲಕ ಮಧ್ಯಾಹ್ನ 12 ಗಂಟೆಗೆ ಕೊಪ್ಪಳ ನಗರದ ಗಂಗಾವತಿ ರಸ್ತೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್) ಭೋಧಕ ಆಸ್ಪತ್ರೆಗೆ ಆಗಮಿಸಿ ವೈದ್ಯಕೀಯ ಶಿಕ್ಷಣ ಇಲಾಖೆ, ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್) ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೊಪ್ಪಳ ವತಿಯಿಂದ ಆಯೋಜಿಸಲಾದ 450 ಹಾಸಿಗೆಯ ಸಾಮರ್ಥ್ಯದ ಬೋಧಕ ಆಸ್ಪತ್ರೆಯ ನೂತನ ಕಟ್ಟಡ ಮತ್ತು ಧರ್ಮಶಾಲಾ ಕಟ್ಟಡದ ಉದ್ಘಾಟನಾ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿಸುವರು.
ಮಧ್ಯಾಹ್ನ 12.30ಕ್ಕೆ ಕೊಪ್ಪಳ ಬಸ್ ನಿಲ್ದಾಣ ಎದುರುಗಡೆ ಭಕ್ತ ಕನಕದಾಸರ ಪುತ್ಥಳಿ ಅನಾವರಣಗೊಳಿಸುವರು. ನಂತರ 12.45ಕ್ಕೆ ಕೊಪ್ಪಳ ಸಮೀಪದ ಭಾಗ್ಯನಗರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ನೆರವೇರಿಸುವರು. ಬಳಿಕ ಮಧ್ಯಾಹ್ನ 1 ಗಂಟೆಗೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಮಾರುತಿ ಸುಜೂಕಿ ಕಾರ್ ಶೋ ರೂಂ ಎದುರುಗಡೆಯ ಅಗಡಿ ಬಡಾವಣೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಪ್ಪಳ ವತಿಯಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ರೂ. 2000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖಾ ಯೋಜನೆಗಳ ಫಲಾನುಭವಿಗಳ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಕಾರ್ಯಕ್ರಮ ಜಿಲ್ಲಾಡಳಿತ ಭವನದಲ್ಲಿ ಕಾಯ್ದಿರಿಸಲಾಗಿದೆ.ಮುಖ್ಯಮಂತ್ರಿಗಳು ಅಂದು ಸಂಜೆ 4 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದಿಂದ ನಿರ್ಗಮಿಸಿ, 4.15ಕ್ಕೆ ಗಿಣಿಗೇರಾ ಏರ್‌ಸ್ಟ್ರೀಪ್ (ಎಂ.ಎಸ್.ಪಿ.ಎಲ್)ಗೆ ಆಗಮಿಸಿ, ಅಲ್ಲಿಂದ 4.25ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಹಾಗೂ ಹಾಗೂ ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 