ನೂತನ ಕೇಂದ್ರೀಯ ವಿದ್ಯಾಲಯಕ್ಕೆ ರಸ್ತೆ ಕಾಮಗಾರಿಗೆ
Road construction for the new Kendriya Vidyalaya
ನೂತನ ಕೇಂದ್ರೀಯ ವಿದ್ಯಾಲಯಕ್ಕೆ ರಸ್ತೆ ಕಾಮಗಾರಿಗೆ
ಚಿಕ್ಕೋಡಿ 02: ತಾಲೂಕಿನ ಸದಲಗಾ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರಿಯ ವಿದ್ಯಾಲಯವು ಇತ್ತೀಚೆಗೆ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 1.57 ಕೋಟಿ ರೂ. ವೆಚ್ಚದ ನೇಜ - ಸದಲಗಾ ಮುಖ್ಯ ರಸ್ತೆಯಿಂದ ಕೇಂದ್ರೀಯ ವಿದ್ಯಾಲಯದ ಮುಖಾಂತರ ಭೈನಾಕವಾಡಿ ಕೂಡುವ ರಸ್ತೆ ಕಾಮಗಾರಿಗೆ 1.57 ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ತಿಳಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ ಅವರು, ಸದಲಗಾ ಪಟ್ಟಣದಲ್ಲಿ ಕೇಂದ್ರೀಯ ವಿದ್ಯಾಲಯ ಪ್ರಾರಂಭಿಸಿ 27.20 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಟ್ಟಡ ಸ್ಥಳಾಂತರಗೊಂಡ ಹಿನ್ನೆಲೆಯಲ್ಲಿ ಸರಕಾರ 1.57 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಮಂಜೂರಾತಿ ನೀಡಿದೆ. ಮತ್ತು ಈ ರಸ್ತೆ ಸುಧಾರಣೆ ಕಾಮಗಾರಿ ಪೂರ್ಣಗೊಂಡ ಬಳಿಕ, ಸದಲಗಾ, ನೇಜ ಹಾಗೂ ಭೈನಾಕವಾಡಿ ನಡುವಿನ ಸಂಪರ್ಕ ಇನ್ನಷ್ಟು ಬಲಗೊಳ್ಳುವುದರೊಂದಿಗೆ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿಗೆ ಪೂರಕವಾಗಲಿದೆ ಎಂದು ಹೇಳಿದರು.
ಈ ರಸ್ತೆ ನಿರ್ಮಾಣದಿಂದ ಸದಲಗಾ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನತೆಗೆ ಸುಗಮ ಸಂಚಾರ ವ್ಯವಸ್ಥೆ ಲಭ್ಯವಾಗಲಿದೆ. ವಿಶೇಷವಾಗಿ ಕೇಂದ್ರಿಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಸುರಕ್ಷಿತ ಸಂಚಾರ ಸಾಧ್ಯವಾಗುವುದು ನನಗೆ ಸಂತೋಷ ತಂದಿದೆ ಎಂದರು.
ನೂತನ ಕೇಂದ್ರೀಯ ವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಪುರಸಭೆ ಅಧ್ಯಕ್ಷ ಬಸವರಾಜ ಗುಂಡಕಲ್ಲೆ ಅವರು ಭೂಮಿ ಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿ ನಮ್ಮ ನಾಯಕರಾದ ಪ್ರಕಾಶ ಹುಕ್ಕೇರಿ ಅವರು ಸಂಸದರಾಗಿದ್ದ ವೇಳೆ ಗ್ರಾಮೀಣ ಭಾಗದ ಮಕ್ಕಳಿಗೆ ನಗರ ಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸುವ ಉದ್ದೇಶದಿಂದ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಮಾಡಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ದತ್ತ ಸಕ್ಕರೆ ಕಾರ್ಖಾನೆ ನಿರ್ದೇಶಕ ಅರುಣ ದೇಸಾಯಿ, ಪುರಸಭೆ ಸದಸ್ಯರಾದ ಸತೀಶ ಪಾಟೀಲ, ರವಿ ಗೋಸಾವಿ, ಉದಯ ಪಾಟೀಲ, ಸುಭಾಷ ಕುರಬೇಟ, ಆನಂದ ತಾರದಾಳೆ, ದೀಲೀಪ ಅನೂರೆ, ಅಪ್ಪಾಸಾಬ ಸಿಂಗಾಡೆ, ಪೋಪಟ ಕಾಂಬಳೆ, ವಸಂತ ಖೋತ, ರಾಹುಲ ಸೂರ್ಯವಂಶಿ, ಅಮರ ಮಧಾಳೆ, ಅಮೀತ ಮಾಳಿ, ಜಿ.ಪಂ.ಇ.ಅ ಸಹಾಯಕ ಅಭಿಯಂತ ಬಿ.ಆರ್. ನಾಯಿಕವಾಡಿ, ಕಿರಿಯ ಅಭಿಯಂತ ಜೆ.ಎಸ್. ಖಾಮಕಾರ, ಗುತ್ತಿಗೆದಾರ ರೋಹನ ಕೋಠಿವಾಲೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 