ಹನುಮಂತಪ್ಪ ಬದ್ರಿ ಅವರ ಮನೆಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Road development works started up to Hanumanthappa Badri's house
ಹನುಮಂತಪ್ಪ ಬದ್ರಿ ಅವರ ಮನೆಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಹಾನಗಲ್ 29 : :ತಾಲೂಕಿನ ಆಡೂರು ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ 31 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ಗ್ರಾಮದ ಪಾಂಡುರಂಗ ದೇವಸ್ಥಾನದಿಂದ ಇಬ್ರಾಹಿಂ ಧಾರವಾಡ ಅವರ ಮನೆಯವರೆಗೆ, ಶಂಕ್ರಣ್ಣ ಹಿರೇಮಠ ಅವರ ಮನೆಯಿಂದ ಸಣ್ಣನಿಂಗಮ್ಮನವರ ಅವರ ಮನೆಯವರೆಗೆ, ಗಂಗಾಧರ ಅಂಗಡಿ ಅವರ ಮನೆಯಿಂದ ಬೀರಲಿಂಗೇಶ್ವರ ದೇವಸ್ಥಾನದವರೆಗೆ, ಅಕ್ಬರ್ ಹರಣಿ ಅವರ ಮನೆಯಿಂದ ಹನುಮಂತಪ್ಪ ಬದ್ರಿ ಅವರ ಮನೆಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯ ಸರಕಾರ ಪ್ರತಿಯೊಂದು ಕುಟುಂಬಗಳಿಗೂ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಇದರ ಜೊತೆಗೆ ಜನತೆಯ ನೆಮ್ಮದಿಯ ಜೀವನಕ್ಕೆ ರಸ್ತೆ, ಸಮರ್ಕ ಕುಡಿಯುವ ನೀರು, ವಿದ್ಯುತ್ ಪೂರೈಕೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕಾಳಜಿ ವಹಿಸಿದೆ ಎಂದು ಶಾಸಕ ಮಾನೆ ತಿಳಿಸಿದರು.
ಗ್ರಾಪಂ ಅಧ್ಯಕ್ಷ ಮಾರ್ತಾಂಡಪ್ಪ ಬಾರ್ಕಿ, ಜಿಪಂ ಮಾಜಿ ಸದಸ್ಯ ನಿಂಗಪ್ಪ ಪೂಜಾರ, ತಾಪಂ ಮಾಜಿ ಅಧ್ಯಕ್ಷ ಶಿವಬಸಪ್ಪ ಪೂಜಾರ, ಗ್ರಾಪಂ ಮಾಜಿ ಅಧ್ಯಕ್ಷ ನಾಗಪ್ಪ ಪೋಲೇಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಭರಮಣ್ಣ ಶಿವೂರ, ಬಾಬು ನಿಕ್ಕಂ, ಸೋಮಣ್ಣ ಗೋಣಗೇರ, ರೇಖಾ ದೇವಗಿರಿ, ಅಮಿನಾಬಿ ನಾಯ್ಕರ್, ನಿಂಗಪ್ಪ ಮೂಕಜ್ಜನವರ, ಬಸವರಾಜ ಡುಮ್ಮನವರ, ಫಕ್ಕೀರವ್ವ ಬಾರ್ಕಿ, ಬಾಬುಲಾಲ್ ನಾಯ್ಕರ್, ಮೈಲಾರಿ ಬಾರ್ಕಿ ಸೇರಿದಂತೆ ಗ್ರಾಪಂ ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 