ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು
Road safety rules must be followed
ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು
ಹಾವೇರಿ 18 : ಎಲ್ಲರೂ ರಸ್ತೆ ಸುರಕ್ಷತೆಯ ಮಹತ್ವ ಅರಿತುಕೊಳ್ಳಬೇಕು ಹಾಗೂ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ ಕಾಟೋಕರ ಅವರು ಹೇಳಿದರು.
ಹಾವೇರಿ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಬುಧವಾರ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಬ್ಲ್ಯೂ ಎಚ್ ಒ ವರದಿ ಪ್ರಕಾರ ಪ್ರತಿ ವರ್ಷ ವಿಶ್ವದಾದ್ಯಂತ 1.3 ಮಿಲಿಯನ್ ಜನರು ರಸ್ತೆ ಅಪಘಾತದಲ್ಲಿ ಮರಣಹೊಂದುತ್ತಿದ್ದು, ಇವರಲ್ಲಿ ಯುವಕರ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಪ್ರಯಾಣಿಕರ ವಾಹನ ಹಾಗೂ ಶಾಲಾ ವಾಹನಗಳು ಸೇರಿದಂತೆ ಎಲ್ಲ ವಾಹನಗಳ ಮಾಲೀಕರು ಅರ್ಹತಾ ಪತ್ರ, ನೋಂದಣಿ ಮಾನ್ಯತೆ, ತೆರಿಗೆ ಪಾವತಿ, ಚಾಲನಾ ಅನುಜ್ಞಾನ ಪತ್ರ ಸೇರಿದಂತೆ ವಾಹನದ ಎಲ್ಲ ದಾಖಲೆಗಳನ್ನು ಕಾಲಕಾಲಕ್ಕೆ ಕಾಲೋಚಿತಗೊಳಿಸಬೇಕು ಹಾಗೂ ವಾಹನಗಳ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಾ.ಕ.ರ.ಸಾ.ಸಂಸ್ಥೆ ಹಾವೇರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ ಜಿ ಅವರು ಮಾತನಾಡಿ, ಎಲ್ಲರ ಜೀವ ಬಹಳ ಮುಖ್ಯವಾದದ್ದು, ಹಾಗಾಗಿ ರಸ್ತೆ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಬೇಕು. ನಾವೆಲ್ಲರೂ ರಸ್ತೆ ಬಳಕೆದಾರರು ಹಾಗೂ ವಾಹನ ಸವಾರರು ಪಾದಚಾರಿಗಳ ಬಗ್ಗೆ ನಿಗಾವಹಿಸಬೇಕು. ಸುರಕ್ಷತೆ ಎಂಬುದು ಘೋಷಣೆ ಯಾಗದೇ ಜೀವನದ ವಿಧಾನವಾಗಬೇಕು. ಟ್ರ್ಯಾಕ್ಟರ್ ಮಾಲೀಕರು ಟ್ರೇಲರಗಳಿಗೆ ಕಡ್ಡಾಯವಾಗಿ ರಿಫ್ಲೆಕ್ಟರ್ ಅಳವಡಿಸಬೇಕು ಎಂದು ಸಲಹೆ ನೀಡಿದರು.
ಮೋಟಾರು ವಾಹನ ನೀರೀಕ್ಷಕ ಮಹೇಶ ಮೆಣಸಿನಕಾಯಿ ಅವರು ಮಾತನಾಡಿ, ಪ್ರತಿಯೊಬ್ಬರೂ ರಸ್ತೆ ಸುರಕ್ಷತೆ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ದ್ವಿಚಕ್ರವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ಮದ್ಯಪಾನಮಾಡಿ ವಾಹನ ಚಾಲನೆ ಮಾಡಬಾರದು ಹಾಗೂ ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಮೋಟಾರು ವಾಹನ ಚಾಲನಾ ತರಬೇತಿ ಕೇಂದ್ರಗಳ, ವಾಯು ಮಾಲಿನ್ಯ ತಪಾಸಣಾ ಕೇಂದ್ರಗಳ ಪ್ರತಿನಿಧಿಗಳು ಇತರರು ಉಪಸ್ಥಿತರಿದ್ದರು. ಪ್ರ.ದ.ಸ ಶ್ರೀಪಾದ ಬ್ಯಾಳಿ ಕಾರ್ಯಕ್ರಮ ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 