ಖಾಯಂ ಜನತಾ ನ್ಯಾಯಾಲಯ ಪಾತ್ರ ಮಹತ್ವದ್ದು: ನ್ಯಾಯಾಧೀಶರು
Role of Permanent People's Court is important: Judge
ಖಾಯಂ ಜನತಾ ನ್ಯಾಯಾಲಯ ಪಾತ್ರ ಮಹತ್ವದ್ದು: ನ್ಯಾಯಾಧೀಶರು
ಇಂಡಿ 29: ಸಾರ್ವಜನಿಕರ ಉಪಯುಕ್ತತೆಗಳ ವಿವಾದಗಳನ್ನು ಪರಿಹರಿಸುವಲ್ಲಿ ಖಾಯಂ ಜನತಾ ನ್ಯಾಯಾಲಯ ಪ್ರಮುಖ ಪಾತ್ರ ವಹಿಸುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗೌರವಾನ್ವಿತ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವಿಜಯಪೂರ.ಎ ಎಸ್ ಹಾಗರಗಿ ಹೇಳಿದರು.
ಅವರು ಇಂದು ಇಂಡಿ ನಗರದ ಮಿನಿ ವಿಧಾನಸೌಧ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ,ವಕೀಲರ ಸಂಘ ಮತ್ತು ತಾಲೂಕು ಆಡಳಿತ ಇಂಡಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಖಾಯಂ ಜನತಾ ನ್ಯಾಯಾಲಯ ಅಭಿಯಾನ ಮತ್ತು ಕಾನೂನು ಅರಿವು -ನೇರವು ಅಭಿಯಾನ ಕಾರ್ಯಕ್ರಮದಲ್ಲಿ ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸದಸ್ಯರು ಖಾಯಂ ಜನತಾ ನ್ಯಾಯಾಲಯ ಕಲಬುರಗಿ ವಿಜಯ ವಿಠ್ಠಲ ಅವರು ಮಾತನಾಡಿ ಸಾರ್ವಜನಿಕ ಉಪಯುಕ್ತತಾ ಸೇವೆಗಳಾದ ಪ್ರಯಾಣಿಕರನ್ನು ಅಥವಾ ಸರಕುಗಳನ್ನು ವಾಯು, ರಸ್ತೆ ಅಥವಾ ನೀರಿನ ಮೂಲಕ ಒದಗಿಸುವ ಸಾಗಾಣಿಕೆಯ ಸೇವೆ, ಅಂಚೆ, ದೂರವಾಣಿ ಸೇವೆ, ವಿದ್ಯುತ್ ಪೂರೆ?ಕೆ, ನೀರಿನ ಸರಬರಾಜು ಮಾಡುವ ಯಾವುದೇ ಸಂಸ್ಥೆ, ಸಾರ್ವಜನಿಕ ಸಂರಕ್ಷ ಣೆ, ನೆ?ರ್ಮಲ್ಯ ವ್ಯವಸ್ಥೆ, ಆಸ್ಪತ್ರೆ, ವಿತರಣೆ ಸೇವೆ, ವಿಮೆ ಸೇವೆ , ಬ್ಯಾಂಕಿಂಗ್ ಹಾಗೂ ಹಣಕಾಸು ಸಂಸ್ಥೆಗಳ , ವಸತಿ ಮತ್ತು ರಿಯಲ್ ಎಸ್ಟೆ?ಟ್ ಸೇವೆ , ಶಿಕ್ಷ ಣ ಈ ಎಲ್ಲ ಸೇವೆಗಳಲ್ಲಿ ನೂನ್ಯತೆ ಉಂಟಾದಾಗ ಅರ್ಜಿ ಸಲ್ಲಿಸಿ ಜನತಾ ನ್ಯಾಯಾಲಯದಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಖಾಯಂ ಜನತಾ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದ್ದು ಸಂಬಂಧಿತ ಜಿಲ್ಲೆಯ ಜನರು ತಮ್ಮ ದೂರುಗಳನ್ನು ಖಾಯಂ ಜನತಾ ನ್ಯಾಯಾಲಯಕ್ಕೆ ಸಲ್ಲಿಸಬಹುದಾಗಿದೆ ಎಂದರೂ.ಈ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದ ಇಂಡಿ ಉಪವಿಭಾಗಾಧಿಕಾರಿ ಅನುರಾಧ ವಸ್ತ್ರದ ಅವರು ಮಾತನಾಡಿ ಖಾಯಂ ಜನತಾ ನ್ಯಾಯಾಲಯಗಳು ಎಂಬುದು ಗ್ರಾಹಕರು ಮತ್ತು ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ವಿವಾದಗಳನ್ನು ಪರಿಹರಿಸಲು ಸ್ಥಾಪಿಸಲಾದ ನ್ಯಾಯಾಲಯಗಳಾಗಿವೆ, ಅಲ್ಲಿ ನ್ಯಾಯಾಲಯದ ಆದೇಶಗಳನ್ನು ತೀಪುಗಳಾಗಿ ಪರಿಗಣಿಸಲಾಗುತ್ತದೆ ಮತ್ತು ಅವುಗಳನ್ನು ಪ್ರಶ್ನಿಸಲಾಗುವುದಿಲ್ಲ. ಈ ನ್ಯಾಯಾಲಯಗಳಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಮತ್ತು ಎರಡು ಅಥವಾ ಮೂರು ತಿಂಗಳೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ ಇದರ ಸದುಪಯೋಗ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಇಂಡಿ ತಹಶೀಲ್ದಾರ ಎಸ್ ಬಿ ಕಡಕಬಾವಿ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬೀಮಾಶಂಕರ ಕನ್ನೂರ ಹಾಗೂ ಸರ್ಕಾರಿ ವಕೀಲರಾದ ಎಸ್ ಆರ್ ಬಿರಾದಾರ, ನ್ಯಾಯವಾದಿಗಳಾದ ಜೆ ಬಿ ಬೇವನೂರ ಎಸ್ ಬಿ ಗಜಾಕೋಶ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 