ದೇಶದ ಉತ್ತಮ ಆಡಳಿತ, ಅಭಿವೃದ್ಧಿಗೆ ಸರ್ಕಾರಿ ನೌಕರರ ಪಾತ್ರ ಮಹತ್ವದ್ದು : ಶಾಸಕ ಪಠಾಣ
Role of government employees is important for good governance and development of the country: MLA P
ಶಿಗ್ಗಾವಿ 16: ನೌಕರರಿಗೆ ಹುದ್ದೆ ಶಾಶ್ವತವಲ್ಲ, ಸಿಕ್ಕಿರುವ ಹುದ್ದೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಮಾತ್ರ ಜನಮನದಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು. ಪಟ್ಟಣದ ವಿರಕ್ತ ಮಠದ ಸಂಗನಬಸವ ಮಂಗಲ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಮಟ್ಟದ ಉತ್ತಮ ಸರ್ಕಾರಿ ನೌಕರರ ಪ್ರಶಸ್ತಿ ಪುರಸ್ಕಾರ ಹಾಗೂ ಸರ್ಕಾರಿ ನೌಕರರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಸರ್ಕಾರಿ ನೌಕರರು ಒತ್ತಡದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಸಕಾಂಗ ಹಾಗೂ ನ್ಯಾಯಾಂಗದ ನಡುವೆ ಕೆಲಸ ಮಾಡಬೇಕಾಗಿದೆ. ಪ್ರತಿನಿಧಿಗಳು, ವಿರೋಧ ಪಕ್ಷದ ಹಾಗೂ ಸಾರ್ವಜನಿಕರ ಒತ್ತಡವೂ ಇರುತ್ತದೆ. ಎಲ್ಲರನ್ನು ಮೆಚ್ಚಿಸುವ ರೀತಿಯಲ್ಲಿ ಸರ್ಕಾರಿ ನೌಕರರು ತಮ್ಮ ಕಾರ್ಯ ಮಾಡಬೇಕಿದೆ ಅಲ್ಲದೇ ಸರ್ಕಾರಿ ನೌಕರರು ತಮ್ಮ ಕುಟುಂಬಕ್ಕೆ ಮಾತ್ರ ಸೀಮಿತವಾಗದೆ ಜನಸಾಮಾನ್ಯರ ಕಷ್ಟ ಪರಿಹರಿಸಲು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ಆದ್ಯತೆ ನೀಡಬೇಕು ಎಂದರು.
ಶಾಸಕ ಯಾಸೀರಖಾನ್ ಪಠಾಣ ಮಾತನಾಡಿದೇಶದ ಉತ್ತಮ ಆಡಳಿತ, ಅಭಿವೃದ್ಧಿಗೆ ಸರ್ಕಾರಿ ನೌಕರರ ಪಾತ್ರ ಮಹತ್ವದ್ದು. ಸರ್ಕಾರಿ ಸೇವೆಗಳಲ್ಲಿಯೆ 60 ವರ್ಷ ಕಳೆದರೂ ಅವರ ನಿವೃತ್ತಿ ನಂತರ ಜೀವನ ಸುಖಮಯವಾಗಿ ಸಾಗಲು ನಿವೃತ್ತಿ ವೇತನ ಅವರ ಜೀವನಕ್ಕೆ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತೇನೆ. ಹಾಗೂ ಸಾಮಾಜಿಕ ಆರ್ಥಿಕ ಕ್ಷೇತ್ರದ ಅಸಮತೋಲನ ದೂರವಾಗಬೇಕು. ಸರ್ಕಾರಿ ನೌಕರರ ಎಮ್ ಪಿ ಎಸ್ ಹೋಗಿ ಒಪಿಎಸ್ ಜಾರಿಗೆ ತರಲು ನೌಕರರ ಸಂಘದ ಜೊತೆಗೆ ಸರ್ಕಾರದ ಮೇಲೆ ಒತ್ತಡ ಹೇರಲು ಸಿದ್ದ ಎಂದರು. ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜ್ಜಂಪೀರ ಎಸ್ ಖಾದ್ರಿ, ತಹಸೀಲ್ದಾರ ಯಲ್ಲಪ್ಪ ಗೋಣೆಣ್ಣವರ, ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ, ತಾಲೂಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರುಣ ಹುಡೆದಗೌಡ್ರ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕ ಮಟ್ಟದ ಉತ್ತಮ ಸರ್ಕಾರಿ ನೌಕರರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿರಕ್ತ ಮಠದ ಸಂಗನಬಸವ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಇಓ ಮಂಜುನಾಥ ಸಾಳೊಂಕಿ, ಬಿಇಓ ಎಂಬಿ ಅಂಬಿಗೇರ, ಮಲ್ಲೇಶ್ ಕರಿಗಾರ , ಸಿಡಿಪಿಓ ಗಣೇಶ್ ಲಿಂಗನಗೌಡ್ರ, ಟಿ.ಹೆಚ್.ಓ ಸತೀಶ್ ಎಆರ್, ಸರಸ್ವತಿ ಗಜಕೋಶ, ಗೀತಾಂಜಲಿ ತೆಪ್ಪದ, ಬಸವರಾಜ ಎಸ್, ಮಲ್ಲಿಕಾರ್ಜುನ ಬಳ್ಳಾರಿ, ರಮೇಶ ಹರಿಜನ, ಶಬ್ಬೀರ್ ಮನಿಯಾರ ಸೇರಿದಂತೆ ವಿವಿಧ ಜಿಲ್ಲೆಗಳ ನೌಕರರ ಸಂಘದ ಅಧ್ಯಕ್ಷರು ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 